10:00 AM Monday30 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಇತ್ತೀಚಿನ ಸುದ್ದಿ

ಮಂಗಳೂರು: 9 ತಿಂಗಳು ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ಬಂಧನ; ಉರ್ವ ಪೊಲೀಸರ ಕಾರ್ಯಾಚರಣೆ

16/07/2023, 19:30

ಮಂಗಳೂರು(reporterkarnataka.com): ಸುಮಾರು 9 ತಿಂಗಳಿನಿಂದ ತಲೆ ಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೊಬ್ಬನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ನಗರದ ಹೊರವಲಯದ ಅಡ್ಯಾರು ಸಮೀಪದ ಕಣ್ಣೂರು ಬಳಿಯ ಕರ್ಮರ್ ನಿವಾಸಿಯಾದ 35ರ ಹರೆಯದ ಸೈಯದ್ ಹಸೈನಾರ್ ಬಂಧಿತ ಆರೋಪಿ. ಪ್ರಕರಣವೊಂದರಲ್ಲಿ ಈತನಿಗೆ ಮಂಗಳೂರಿನ
ಜೆಎಂಎಫ್ ಸಿ 3ನೇ ನ್ಯಾಯಾಲಯ 2014 ಅಕ್ಟೋಬರ್ 18ರಂದು 4 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಮತ್ತು1,500 ರೂ‌. ದಂಡ ವಿಧಿಸಿತ್ತು. ನಂತರ ಆರೋಪಿಯು ಸುಮಾರು 9 ವರ್ಷಗಳಿಂದ ತಲೆಮರಿಸಿಕೊಂಡಿದ್ದು, ಈತನನ್ನು ಜುಲೈ 15ರಂದು ಉರ್ವಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿದ್ದಾರೆ.
ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಆರ್. ಜೈನ್ ಅವರು ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯ ದಸ್ತಗಿರಿಗೆ ಮಾರ್ಗದರ್ಶನ ನೀಡಿದ್ದು, ಎಸಿಪಿ ಅಂಶು ಕುಮಾರ್,
ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ದಿನೇಶ್ ಕುಮಾರ್, ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಚರಣೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು