11:56 AM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ; ನಿವೃತ್ತ ಅಧಿಕಾರಿಗೆ 5 ವರ್ಷ ಜೈಲು, 1.30 ಕೋಟಿ ದಂಡ

07/09/2022, 23:16

ಮಂಗಳೂರು(reporterkarnataka.com): ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷಗಳ ಕಾಲ ಸಾದಾ ಸಜೆ ಮತ್ತು 1.30 ಕೋಟಿ ರೂ.ದಂಡ ವಿಧಿಸಿ ಶಿಕ್ಷೆ ವಿಧಿಸಿದೆ.

ಗಂಗಾಧರ ವಿ. ಮಡ್ಡಿಕೇರಿ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ವಿರುದ್ಧ ಮಂಗಳೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2013ರ ಆ. 5ರಂದು ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆಯನ್ನು ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಅಪರಾಧಿಗೆ ಕಲಂ 13(1) (ಇ) ಮತ್ತು 13(2) ಲಂಚ ನಿರೋಧ ಕಾಯ್ದೆ 1988ರಡಿ 5 ವರ್ಷಗಳ ಕಾಲ ಸಾದಾ ಸಜೆ ಹಾಗೂ 1.30 ಕೋ.ರೂ. ದಂಡ, ದಂಡ ಕಟ್ಟಲು ವಿಫ‌ಲನಾದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು