4:31 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮಂಗಳೂರು ಅಭಿವೃದ್ಧಿಗೆ ಕೇಂದ್ರ- ರಾಜ್ಯದಿಂದ ದಾಖಲೆ ಪ್ರಮಾಣದ ಅನುದಾನ ತರಲಾಗಿದೆ: ಶಾಸಕ ವೇದವ್ಯಾಸ ಕಾಮತ್

05/03/2023, 15:41

ಮಂಗಳೂರು(reporterkarnataka.com): ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದಿಂದ ದಾಖಲೆ ಪ್ರಮಾಣದ ಅನುದಾನ ತರಲಾಗಿದ್ದು ನಗರದಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ನಗರದ‌ ಕಂಕನಾಡಿ ವಾರ್ಡಿನ ನೆಕ್ಕರೆಮಾರ್ ಪರಿಸರದಲ್ಲಿ 1.85 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಕಳೆದ 5 ವರ್ಷಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ತಡೆಯಿಲ್ಲದೆ ನಿರಂತರವಾಗಿ ನಡೆಯುತ್ತಿದೆ. ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದ ಅನೇಕ ಯೋಜನೆಗಳು ಮಂಗಳೂರು ನಗರದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಶಾಸಕ ಕಾಮತ್ ನುಡಿದರು.
ನೆಕ್ಕರೆಮಾರ್ ಪರಿಸರದಲ್ಲಿ ರಾಜಕಾಲುವೆ ಅಭಿವೃದ್ಧಿ, ರಸ್ತೆ ನಿರ್ಮಾಣ ಹಾಗೂ ಚರಂಡಿ ಅಭಿವೃದ್ಧಿಗೆ 1.85 ಕೋಟಿ ರೂಪಾಯಿ ಬಿಡುಗಡೆಗೊಳಿಸಿದ್ದು, ಈ ಭಾಗದ ಸಾರ್ವಜನಿಕರ ಸಮಸ್ಯೆಯನ್ನು ಬಗೆಹರಿಸಲು ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರದಲ್ಲಿ ಮಳೆಗಾಲದಲ್ಲಿ ಉಂಟಾಗುವ ಕೃತಕ ನೆರೆ ಬಾಧೆಯನ್ನು ತಪ್ಪಿಸಲು ಸಮಗ್ರವಾಗಿ ಚಿಂತನೆ ನಡೆಸಲಾಗಿದ್ದು ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಗೊಳಿಸಿ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಕಿರಣ್ ರೈ , ಭರತ್ ರಾಜ್ ಶೆಟ್ಟಿ, ಸುಕೇಶ್,ಸುಜಾತ,ರಾಜೇಶ್ ಎಕ್ಕೂರ್ ,ರಾಮ್ ಪ್ರಸಾದ್, ಚೇತನ್ ನೆಕ್ಕರೆಮಾರ್,ಜಯಂತಿ, ಚಂದ್ರಶೇಖರ್ ಗಂಗಾಧರ್ ಕೋಟ್ಯಾನ್, ಧನಂಜಯ್, ಮೋಹನ್ ದೇವಾಡಿಗ, ವಸಂತ ನವೀನ್ ದಿನೇಶ್ ಗುನರಾಜ್ ಶಿವರಾಮ್ ಮನಿಯಾನಿ,ಗಣೇಶ್ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು