5:40 PM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಮಂಗಳೂರು: 7 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

08/05/2026, 20:16

ಮಂಗಳೂರು(reporterkarnataka.com): 2018ರಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕಾಸರಗೋಡು ಉಪ್ಪಳದ ಪಾವಲಿಕೆ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಅಲಿಯಾಸ್ ಕಾಪ್ರಿ ಸಿದ್ದೀಕ್ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯ ವಿರುದ್ಧ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ನ್ಯಾಯಾಲಯದಿಂದ NBW ವಾರಂಟ್ ಜಾರಿಯಾಗಿತ್ತು.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳವು ಹಾಗೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧಿತ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಜಾರಿಯಾಗಿದ್ದ NBW (Non-Bailable Warrant) ಗಳನ್ನು ತಪ್ಪಿಸಿಕೊಂಡು 2018ರಿಂದ ತಲೆಮರೆಸಿಕೊಂಡಿದ್ದ. ಆರೋಪಿಯ ವಿರುದ್ಧ ಮಂಗಳೂರು ನಗರದ ಉಳ್ಳಾಲ, ಕೊಣಾಜೆ ಹಾಗೂ ಕಂಕನಾಡಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 3 NBW ವಾರಂಟ್‌ಗಳು ಬಾಕಿ ಇದ್ದವು.
ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು