6:30 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಮಂಗಳೂರು ಆಚಾರ್ಯ ಮಠಕ್ಕೆ ಸತ್ಯಾತ್ಮ ತೀರ್ಥ ಶ್ರೀಗಳ ಭೇಟಿ: ಪೂರ್ಣ ಕುಂಭ ಸ್ವಾಗತ

09/05/2022, 21:39

ಮಂಗಳೂರು(reporterkarnataka.com) : 

ಚಿತ್ರ : ಮಂಜು ನೀರೇಶ್ವಾಲ್ಯ 

ನಗರದ ರಥಬೀದಿಯಲ್ಲಿರುವ ಶ್ರೀ ಆಚಾರ್ಯ ಮಠ ಹಾಗೂ ಶ್ರೀ ವೆಂಕಟರಮಣ ದೇವಳಕ್ಕೆ ಉತ್ತರಾದಿ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ  ಶ್ರೀ ಸತ್ಯಾತ್ಮ ತೀರ್ಥ  (ಶ್ರೀ ಶ್ರೀ ೧೦೦೮ ಸತ್ಯಾತ್ಮ ತೀರ್ಥ ಸ್ವಾಮಿಗಳು) ಶ್ರೀ ಆಚಾರ್ಯಮಠದ ಪಂಡಿತ್ ನರಸಿಂಹ ಆಚಾರ್ಯರ ವಿನಂತಿ ಮೇರೆಗೆ ಆಗಮಿಸಿದ್ದು ಶ್ರೀಗಳವರು ಶ್ರೀ ಭದ್ರ ನರಸಿಂಹ ದೇವರ ಹಾಗೂ ಶ್ರೀ ವೀರ ವೆಂಕಟೇಶ ದೇವರ ದರ್ಶನ ಪಡೆದರು.

ಪ್ರಾರಂಭದಲ್ಲಿ ಶ್ರೀಗಳವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಬಳಿಕ ಶ್ರೀಗಳವರ ಪಾದ ಪೂಜೆ ನೆರವೇರಿತು. ಶ್ರೀ ಆಚಾರ್ಯಮಠ ಕುಟುಂಬಸ್ಥರಿಗೆ ಶ್ರೀಗಳವರು ಫಲ ಮಂತ್ರಕ್ಷತೆ ನೀಡಿ ಆಶೀರ್ವದಿಸಿದರು . ಈ ಸಂದರ್ಭದಲ್ಲಿ ಪಂಡಿತ್ ನರಸಿಂಹ ಆಚಾರ್ಯ , ಪಂಡಿತ್ ರಾಘವೇಂದ್ರ ಆಚಾರ್ಯ , ಶ್ರೀ ದೇವಳದ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಕೆ . ಗಣೇಶ್ ಕಾಮತ್ , ಜಗನ್ನಾಥ ಕಾಮತ್ , ಕಿರಣ್ ಪೈ  , ಸತೀಶ್ ಪ್ರಭು ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು