1:00 PM Tuesday9 - September 2025
ಬ್ರೇಕಿಂಗ್ ನ್ಯೂಸ್
ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ ಹೃದಯಘಾತ: ಕಾರಿನಲ್ಲೇ ಉಸಿರು ನಿಲ್ಲಿಸಿದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ Kodagu | ಸರಣಿ ಅಪಘಾತ: ರಸ್ತೆ ಮಧ್ಯೆ ಅಡ್ಡ ನಿಂತಿದ್ದ ಟ್ರ್ಯಾಕ್ಟರ್ ಗೆ… ವಿರಾಜಪೇಟೆ ಕೊಡಗು ಗೌಡ ಸಮಾಜಕ್ಕೆ ಸುಳ್ಯದ ಕುರುಂಜಿ ವೆಂಕರಮಣ ಗೌಡ ಕುಟುಂಬದಿಂದ 3.5…

ಇತ್ತೀಚಿನ ಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಸೆಕ್ಯುರಿಟಿ ಮತ್ತಷ್ಟು ಟೈಟ್

04/05/2024, 16:47

ಮಂಗಳೂರು(reporterkarnataka.com): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಇ ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಭದ್ರತೆಯನ್ನು ಇನ್ನಷ್ಟು ತೀವ್ರಗೊಳಿಸಲಾಗಿದೆ.
ವಿಮಾನ ನಿಲ್ದಾಣ ಹಾಗೂ ವಿಮಾನಗಳಲ್ಲಿ ಬಾಂಬ್‌ ಇರಿಸಲಾಗಿದೆ. ಕೆಲವೇ ಗಂಟೆಗಳಲ್ಲಿ ಬಾಂಬ್‌ಗಳು ಸ್ಫೋಟಗೊಳ್ಳಲಿವೆ. ಇದರಿಂದ ದೊಡ್ಡ ರಕ್ತಪಾತವೇ ನಡೆಯಲಿದೆ ಎಂದು ಉಗ್ರರ ಹೆಸರಿನಲ್ಲಿ ಪೊಲೀಸರಿಗೆ ಇಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.
ಏಪ್ರಿಲ್ 29ರಂದು ಬಾಂಬ್ ಇಟ್ಟಿರುವ ಬಗ್ಗೆ ಬೆದರಿಕೆ ಇಮೇಲ್ ಬಂದಿದ್ದು, ಇಮೇಲ್ ಸಂದೇಶದ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಭಾರತದ 22 ವಿಮಾನ ನಿಲ್ದಾಣಕ್ಕೆ ಈ ತರಹ ಬೆದರಿಕೆ ಸಂದೇಶ ಬಂದಿದೆ.
ಈ ಪ್ರಕರಣದ ತಡವಾಗಿ ಬೆಳಕಿಗೆ ಬಂದಿದೆ. ಬಾಂಬ್ ಬೆದರಿಕೆ ಪ್ರಕರಣವನ್ನು ಪೊಲೀಸರು ಗೌಪ್ಯವಾಗಿಟ್ಟು ವಿಮಾನ ನಿಲ್ದಾಣದಲ್ಲಿ ಬಾಂಬ್ ಪರಿಶೀಲನೆ ಮಾಡಲಾಗಿದೆ. ಇದರೊಂದಿಗೆ ವಿಮಾನ ನಿಲ್ದಾಣದಲ್ಲಿ ಪೊಲೀಸರಿಂದ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು