ಇತ್ತೀಚಿನ ಸುದ್ದಿ
ಮಂಗಳೂರು ಏರ್ ಪೋರ್ಟ್: ಅಬುದಾಬಿಯಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿ 98.68 ಲಕ್ಷ ಮೌಲ್ಯದ 1.50 ಕೆಜಿ ಚಿನ್ನ ಪತ್ತೆ; ಪೊಲೀಸ್ ವಶಕ್ಕೆ
09/01/2024, 15:42
ಮಂಗಳೂರು(reporterkarnataka.com): ಅಬುಧಾಬಿಯಿಂದ ಬಂದ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನೊಬ್ಬನು ತನ್ನ ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡಿದ್ದ ಒಂದೂವರೆ ಕೆಜಿ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಜ. 8ರಂದು
ಬಜ್ಪೆಗೆ ಬಂದಿಳಿದ ಪ್ರಯಾಣಿಕರೊಬ್ಬರು ನಡೆದಾಡುವ ವಿಚಿತ್ರ ವರ್ತನೆ ಕಂಡು ಕಸ್ಟಮ್ಸ್ ಅಧಿಕಾರಿಗಳು ಸಂಶಯದಿಂದ ತಪಾಸಣೆ ಮಾಡಿದಾಗ ಚಿನ್ನ ಇರುವುದು ಪತ್ತೆಯಾಗಿದೆ. 24 ಕ್ಯಾರೆಟ್ ಚಿನ್ನವನ್ನು ಪೇಸ್ಟ್ ಮಾಡಿ ಐದು ಉಂಡೆ ಮಾಡಿ ಅದನ್ನು ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡಿದ್ದರು.
1,579 ಗ್ರಾಂ ಚಿನ್ನ ಪತ್ತೆಯಾಗಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನದ ಮಾರುಕಟ್ಟೆ ಮೌಲ್ಯ ಅಂದಾಜು 98.68 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿ ಪ್ರಯಾಣಿಕನನ್ನು ಬಂಧಿಸಿ ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.