1:05 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಮಂಗಳೂರು: ಅಮಿತ್ ಶಾ ರಾಜೀನಾಮೆ ಆಗ್ರಹಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ಪ್ರತಿಭಟನೆ

06/01/2025, 23:00

ಮಂಗಳೂರು(reporterkarnataka.com): ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ’ಸಂವಿಧಾನ ಸಂರಕ್ಷಣಾ ಜಾಥಾ ನಡೆಯಿತು.
ಪ್ರತಿಭಟನಾಕಾರರು ಈ ವೇಳೆ ಅಮಿತ್ ಶಾ ವಿರುದ್ದ ಘೋಷಣೆ ಕೂಗಿ ರಾಜೀನಾಮೆಗೆ ಆಗ್ರಹಿಸಿದರು. ನಗರದ ಅಂಬೇಡ್ಕರ್ ವೃತ್ತದಿಂದ (ಹಳೆ ಜ್ಯೋತಿ ಸರ್ಕಲ್) ಮಿನಿ ವಿಧಾನಸೌಧದ ವರೆಗೆ ’ಸಂವಿಧಾನ ಸಂರಕ್ಷಣಾ ಜಾಥಾ’ ನಡೆದು ಬಳಿಕ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ದೇಶದ ಚರಿತ್ರೆ ತಿಳಿಯದವರಿಗೆ ದೇಶವನ್ನು ಕಟ್ಟಲು ಅಸಾಧ್ಯ. ಅಮಿತ್ ಶಾ ಅವರೇ, ನೀವು ಈ ದೇಶದ ಸಂವಿಧಾನವನ್ನು ಓದಿದ್ದೀರಾ? ಎಂದು ಪ್ರಶ್ನಿಸಿದರು.
ಅಮಿತ್ ಶಾ ಹೇಳಿಕೆಯಿಂದ ದೇಶದ ಕೋಟ್ಯಂತರ ಜನ ನೊಂದಿದ್ದಾರೆ. ಸಂವಿಧಾನಕ್ಕೆ ಅವಮಾನ ಮಾಡಿರುವ ಅಮಿತ್ ಶಾರನ್ನು ಸಂಪುಟದಿಂದ ವಜಾಗೊಳಿಸಲು ಪ್ರಧಾನಿಗೆ ಸೂಚನೆ ನೀಡಬೇಕು. ಪ್ರಧಾನಿ ಮಾಡದಿದ್ದರೆ ನೀವು ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ರಾಷ್ಟ್ರಪತಿಯನ್ನು ಆಗ್ರಹಿಸಿದರು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ’ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಹೇಳಿಕೆ ನೀಡುವ ಮೂಲಕ ಸಾಮಾಜಿಕ ನ್ಯಾಯ ವಂಚಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಮೋದಿಯವರು ಸಂವಿಧಾನದ ಪುಸ್ತಕ ಮುಂದಿಟ್ಟು ನಾಟಕ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರ ಹೋರಾಟ ಮಾಡುತ್ತಿದೆ. ಜೈ ಗಾಂಧಿ, ಜೈ ಭೀಮ್ , ಜೈ ಸಂವಿಧಾನ ನಮ್ಮ ಧ್ಯೇಯವಾಗಿದೆ. ಸಂವಿಧಾನದ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಅಮಿತ್ ಶಾ ರಾಜೀನಾಮೆ ನೀಡುವ ತನಕ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಅಮಿತ್ ಶಾ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಂಪುಟದಿಂದ ವಜಾಗೊಳಿಸಿಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿ ವಿಧಾನ ಕ್ಷೇತ್ರಗಳಲ್ಲೂ ಹೋರಾಟ ನಡೆಸಲಿದೆ ಎಂದು ತಿಳಿಸಿದರು.



ದ.ಕ.ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ಮಾತನಾಡಿ, ಅಂಬೇಡ್ಕರ್ ಕಾರಣದಿಂದಾಗಿಯೇ ಅಮಿತ್ ಶಾ ಸಚಿವರಾಗಿದ್ದಾರೆ. ಅಂಬೇಡ್ಕರ್ ವಿಶ್ವಜ್ಞಾನಿಯಾಗಿದ್ದಾರೆ. ಅಂಬೇಡ್ಕರ್ ಹೆಸರಲ್ಲ ಅವರು ನಮ್ಮ ಉಸಿರು ಎಂದರು.
ರಾಜ್ಯ ಗೇರು ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಮಾಜಿ ಶಾಸಕ ಜೆ.ಆರ್ ಲೋಬೊ, ಮಾಜಿ ಮೇಯರ್ ಗಳಾದ ಶಶೀಧರ ಹೆಗ್ಡೆ ಹಾಗೂ ಕೆ.ಅಶ್ರಫ್, ಕಾಂಗ್ರೆಸ್ ನಾಯಕರಾದ ಪದ್ಮರಾಜ್ ಆರ್. ಪೂಜಾರಿ, ಮಿಥುನ್ ರೈ, ಅನಿಲ್ ಕುಮಾರ್, ಸುಧೀರ್ ಕುಮಾರ್, ಶಾಲೆಟ್ ಪಿಂಟೊ, ಇನಾಯತ್ ಅಲಿ, ಎಂ.ಜಿ. ಹೆಗಡೆ, ಲುಕ್ಮಾನ್ ಬಂಟ್ವಾಳ, ಬಶೀರ್ ಬೈಕಂಪಾಡಿ, ಕೆ.ಕೆ.ಶಾಹುಲ್ ಹಮೀದ್, ಸುಹಾನ್ ಆಳ್ವ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು