8:38 AM Sunday4 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯ ಬಂಧನ

24/05/2026, 14:28

ಮಂಗಳೂರು(reporterkarnataka.com): ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಪಣಂಬೂರಿನಲ್ಲಿ ಬಂಧಿಸಿದ್ದಾರೆ.
ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಅಲಿಯಾಸ್ ಬೋಜ ಅಕ್ರ ಎಂಬಾತ ಬಂಧಿತ ಹಳೆ ಆರೋಪಿ.
ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ:457, 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ ಅಲಿಯಾಸ್ ಬೋಜ ಅಕ್ರ ಎಂಬಾತನನ್ನು ಮೇ 22ರಂದು, ಉಪ್ಪಿನಂಗಡಿ ಪೊಲೀಸ್ ಠಾಣಾ ತನಿಖೆ-2 ಪಿಎಸೈ ಕೌಶೀಕ್ ಬಿಸಿ, ಸಿಬ್ಬಂದಿಯವರಾದ ಶಿವರಾಮ್ ರೈ, ಮಹದೇವ ರವರು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೊಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು