7:18 PM Saturday22 - November 2025
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Mangaluru | ಆನೆಗುಂಡಿ: ಅಶ್ವಥ ಕಟ್ಟೆ ಮೇಲ್ಛಾವಣಿ ಉದ್ಘಾಟನೆ; ವಾಸ್ತು ಪೂಜೆ

22/11/2025, 19:15

ಮಂಗಳೂರು(reporterkarnataka.com): ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಭಾಗವಹಿಸಿದರು.

ನಂತರ ಮಾತನಾಡಿದ ಶಾಸಕರು, ಸ್ಥಳೀಯರ ಬೇಡಿಕೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿನ ಅಶ್ವಥ ಕಟ್ಟೆಗೆ ಹಾಗೂ ಮೇಲ್ಛಾವಣಿಗೆ ಸಹಕಾರ ನೀಡಿರುವುದು ತೃಪ್ತಿ ತಂದಿದೆ. ಎಲ್ಲರಿಗೂ ಇದರಿಂದ ಉಪಯೋಗವಾದರೆ ಅದೇ ತೃಪ್ತಿ ಎಂದರು.
ವಾರ್ಡ್ ಅಧ್ಯಕ್ಷ ಕೆ. ನಾರಾಯಣ ಅವರು ಮಾತನಾಡಿ, ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಇಲ್ಲಿನ ಅಶ್ವಥ ಕಟ್ಟೆಗೆ ಶಾಸಕ ವೇದವ್ಯಾಸ ಕಾಮತ್ ರವರು ನಮ್ಮ ಮನವಿಗೆ ಸ್ಪಂದಿಸಿ ಸಂಪೂರ್ಣ ಸಹಕಾರ ನೀಡಿದ್ದರು. ಅದರ ಉದ್ಘಾಟನೆಯಾದಾಗಲೇ ಇಲ್ಲಿನ ಭಕ್ತರ ಅನುಕೂಲಕ್ಕೆ ಅಗತ್ಯವಿರುವ ಮೇಲ್ಛಾವಣೆಯನ್ನೂ ಒದಗಿಸಿ ಕೊಡುತ್ತೇನೆಂದು ಭರವಸೆ ನೀಡಿದ್ದರು. ಇದೀಗ ಅದೂ ಸಹ ಈಡೇರಿದ್ದು ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಕಾರ ನೀಡುತ್ತೇನೆ ಎಂದಿರುವ ಶಾಸಕರಿಗೆ ಬಿಜೈ 31 ನೇ ವಾರ್ಡ್ ನ ಜನತೆ ಹಾಗೂ ತ್ರಿಮೂರ್ತಿ ಸೇವಾ ಸಮಿತಿಯ ಸರ್ವ ಸದಸ್ಯರ ಪರವಾಗಿ ಅನಂತ ಕೋಟಿ ಧನ್ಯವಾದಗಳು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಪ್ರಶಾಂತ್ ಆಳ್ವ, ಜಯಕುಮಾರ್, ಋತ್ವಿಕ್ ಕದ್ರಿ, ಹಿರಿಯರಾದ ನಾರಾಯಣ ಮಾಸ್ಟರ್, ತ್ರಿಮೂರ್ತಿ ಸೇವಾ ಸಮಿತಿಯ ಅಧ್ಯಕ್ಷರಾದ ವಸಂತ್ ಸಹಿತ ಎಲ್ಲಾ ಪದಾಧಿಕಾರಿಗಳು ಹಾಗೂ ಬಿಜೆಪಿ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು