9:36 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್ ನಲ್ಲಿ ಅಕ್ಟೋಬರ್ 12ರಂದು ವಾರ್ಷಿಕ ಹಬ್ಬ: 12 ಚರ್ಚ್ ಧರ್ಮಗುರುಗಳಿಂದ ಬಲಿಪೂಜೆ

09/10/2025, 18:58

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ವಾರ್ಷಿಕ ಹಬ್ಬ (ಸಾಂತ್ ಮಾರಿ) ವನ್ನು ಅಕ್ಟೋಬರ್ 12ರಂದು ವಿಜೃಂಭಣೆಯಿಂದ ಆಚರಿಸಲಾಗುವುದು.
ಅಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಧರ್ಮ ಪ್ರಾಂತ್ಯದ ವಿಶ್ರಾಂತ ಬಿಷಪ್ ಅತಿ ವಂದನೀಯ ಡಾ. ಅಲೋಷಿಯಸ್ ಪಾವ್ಲ್ ಡಿ’ ಸೋಜಾ ಅವರು ಬಲಿ ಪೂಜೆಯ ನೇತೃತ್ವ ವಹಿಸಿ ಸಮಸ್ತ ಭಕ್ತರನ್ನು ಆಶೀರ್ವದಿಸುವರು. ಪಾಲ್ದನೆ ಚರ್ಚ್ ಧರ್ಮ ಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಮತ್ತು ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ವ್ಯಾಪ್ತಿಯ 12 ಚರ್ಚ್ ಗಳ ಧರ್ಮ ಗುರುಗಳು ಬಲಿ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ಅದೇ ದಿನ ಐ ಸಿ ವೈ ಎಂ ಸದಸ್ಯರು ‘ನಶೀಬಚೊ ಖೆಳ್‌’ ಎಂಬ ಮನೋರಂಜನಾ ಕಾರ್ಯಕ್ರಮ ಮತ್ತು ಗೇಮ್ಸ್ ಗಳನ್ನು ನಡೆಸುವರು. ಅಲ್ಲದೆ ಸ್ಟಾಲ್ ಗಳ ವ್ಯವಸ್ಥೆಯನ್ನು ಮಾಡಲಿದ್ದಾರೆ. ಸಂಜೆ ‘ತಾಲೆಂತಾಚೊ ಸಂಭ್ರಮ್’ ಎಂಬ ಕಾರ್ಯಕ್ರಮವಿದ್ದು, ಅದರಲ್ಲಿ ಚರ್ಚಿನ ಸದಸ್ಯರಿಗೆ ವಿವಿಧ ಸ್ಪರ್ಧೆಗಳು, ಫುಡ್ ಫೆಸ್ಟಿವಲ್, ಪ್ರಸಿದ್ಧ ಗಾಯಕರಿಂದ ಸಂಗೀತ ಕಾರ್ಯಕ್ರಮ ಇರಲಿದೆ ಎಂದು ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು