2:01 AM Thursday28 - November 2024
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ…

ಇತ್ತೀಚಿನ ಸುದ್ದಿ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ 15 ಮಂದಿ ಸಿರಿಯಾ ನಾವಿಕರ ರಕ್ಷಣೆ; ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ

22/06/2022, 10:45

ಮಂಗಳೂರು(reporterkarnataka.com):  ಪ್ರತೀಕೂಲ ಹವಾಮಾನದಿಂದಾಗಿ ಅರಬ್ಬೀ ಸಮುದ್ರದಲ್ಲಿ ಜಿಲ್ಲೆಯ ಕರಾವಳಿ ತೀರದಿಂದ 5.2 ಮೈಲಿ ದೂರದಲ್ಲಿ ಲಂಗರು ಹಾಕಿದ್ದ ವಿದೇಶಿ ಹಡಗಿನಲ್ಲಿದ್ದ 15 ಮಂದಿ ವಿದೇಶಿ ಪ್ರಜೆಗಳನ್ನು ಭಾರತೀಯ ಕರಾವಳಿ ರಕ್ಷಣಾ ಪಡೆಯು (ಐಸಿಜಿ) ರಕ್ಷಣೆ ಮಾಡಿದೆ.

ಸಿರಿಯಾ ದೇಶದ 15 ನಾವಿಕರು ಎಂ.ವಿ.ಪ್ರಿನ್ಸಸ್‌ ಮಿರಾಲ್‌ ಎಂಬ ಹಡಗಿನಲ್ಲಿ ಅರಬ್ಬೀ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನು  ಐಸಿಜಿ ಸಿಬ್ಬಂದಿಗಳು ಮಂಗಳವಾರ ರಕ್ಷಣೆ ಮಾಡಿದ್ದಾರೆ. ಹಡಗಿನಲ್ಲಿ 8 ಸಾವಿರ ಟನ್‌ ಉಕ್ಕಿನ ಕಾಯಿಲ್‌ಗಳನ್ನು ಚೀನಾದ ಟಿಯಾಂಜಿನ್‌ನಿಂದ ಲೆಬನಾನ್‌ಗೆ ಸಾಗಿಸಲಾಗುತ್ತಿತ್ತು. ಹಡಗಿನ ಒಳಭಾಗದಲ್ಲಿ ಸಣ್ಣ ರಂಧ್ರದ ಮೂಲಕ ನೀರು ಒಳಗೆ ನುಗ್ಗಿತ್ತು. ಅದನ್ನು ದುರಸ್ತಿ ಪಡಿಸುವ ಸಲುವಾಗಿ ಈ ಹಡಗನ್ನು ನವಮಂಗಳೂರು 

ಬಂದರಿಗೆ ತರಲು ಅನುಮತಿ ನೀಡುವಂತೆ ಕ್ಯಾಪ್ಟನ್‌ ಈ ಮೇಲ್‌ ಮೂಲಕ ದಕ್ಷಿಣ ಕನ್ನಡ ಜಿಲ್ಲಾಡಳಿತವನ್ನು ಕೋರಿದ್ದರು.

ಈ ನಡುವೆ ಭಾರತೀಯ ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಪ್ರತೀಕೂಲ ಹವಾಮಾನವನ್ನು ಲೆಕ್ಕಿಸದೇ ವಿಕ್ರಮ್‌ ಹಾಗೂ ಅಮರ್ಥ್ಯ ಹಡಗುಗಳಲ್ಲಿ ಸ್ಥಳಕ್ಕೆ ಧಾವಿಸಿ, ಸಮುದ್ರದಲ್ಲಿ ಸಿಲುಕಿದ್ದ ಸಿರಿಯಾ ಪ್ರಜೆಗಳನ್ನು ದಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

…….

ಹಿಂದೂ ಮಹಾಸಾಗರ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗೆ ನೋಡೆಲ್‌ ಏಜೆನ್ಸಿ ಆಗಿರುವ ಭಾರತೀಯ ಕರಾವಳಿ ರಕ್ಷಣಾ ಪಡೆಯ ರಕ್ಷಣಾ ಸಾಮರ್ಥ್ಯವನ್ನು ಈ ಯಶಸ್ವಿ ಕಾರ್ಯಾಚರಣೆಯು ಮತ್ತೆ ಸಾಬೀತು ಮಾಡಿದೆ. ‘ನಾವು ರಕ್ಷಿಸುತ್ತೇವೆ’ ಎಂಬ ಧ್ಯೇಯಕ್ಕೆ ಕರಾವಳಿ ರಕ್ಷಣಾ ಪಡೆಯು ಬದ್ಧವಾಗಿರುವುದನ್ನು ಎತ್ತಿ ತೋರಿಸಿದೆ ಎಂದು ಐಸಿಜಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು