8:57 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Mangaluru | ಆತ್ಮಶಕ್ತಿ ಸಹಕಾರ ಸಂಘ: ಸಹಕಾರ ಸಂಘಗಳ ಕಾನೂನು, ಭದ್ರತೆ, ಸುರಕ್ಷತೆ ಬಗ್ಗೆ ಅರಿವು ಕಾರ್ಯಕ್ರಮ

31/08/2026, 20:49

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಹಾಗೂ ಖಾಯಂ ಜನತಾ ನ್ಯಾಯಾಲಯ ಮಂಗಳೂರು ಇವರ ಜಂಟಿ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳಿಗೆ ಸಹಕಾರ ಸಂಘಗಳ ಕಾನೂನು, ಭದ್ರತೆ ಹಾಗೂ ಸುರಕ್ಷತಾ ಬಗ್ಗೆ ಅರಿವು ಕಾರ್ಯಾಗಾರವು ಪಡೀಲ್‌ನ ಆತ್ಮಶಕ್ತಿ ಸೌಧದಲ್ಲಿ ನಡೆಯಿತು.
ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಐ. ತಾರಾನಾಥ ಪೂಜಾರಿ ಈ ಕಾರ್ಯಾಗರವನ್ನು ಉದ್ಘಾಟಿಸಿ, ಮಾತನಾಡಿ “ಜಸ್ಟೀಸ್ ಅಂದ್ರೆ ಅಲ್ಲಿ ಸೋಲು ಗೆಲುವಿನ ಪ್ರಶ್ನೆಯಲ್ಲ. ನ್ಯಾಯ ಅಂದ್ರೆ ಸಂದರ್ಭವನ್ನು ಎದುರಿಸುವ ಶಕ್ತಿ. ಸಹಕಾರ ಕ್ಷೇತ್ರದಲ್ಲಿ ಸಂಘಗಳ ಪ್ರಗತಿಗೆ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹಾಗೂ ಸಿಬ್ಬಂದಿಗಳ ಕೊಡುಗೆ ಅಪಾರವಾದುದ್ದು, ಎಂದು ಹೇಳಿ ಅರಿವು ಕಾರ್ಯಾಗಾರದ ಮಹತ್ವವನ್ನು ವಿವರಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅತೀ ಕಡಿಮೆ ಅವಧಿಯಲ್ಲಿ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ 35 ಶಾಖೆಗಳನ್ನು ಸ್ಥಾಪಿಸಿ, ಗ್ರಾಹಕ ಸ್ನೇಹಿ ಸೇವೆಯೊಂದಿಗೆ ಉತ್ತಮ ಸಾಧನೆಯನ್ನು ಮಾಡುತ್ತಿದೆ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಾಧನೆಯನ್ನು ಮಾಡುವಂತಾಗಲಿ ” ಎಂದು ಶುಭ ಹಾರೈಸಿದರು.
ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಜಗದೀಶ್ ಕೆ. ಶೇಣವ ರವರು ಮಾತನಾಡಿ “ಪರಸ್ಪರ ಸಹಕಾರದಿಂದ ಸೊಸೈಟಿಗಳು ಶೀಘ್ರಗತಿಯಲ್ಲಿ ಸೇವೆಗಳನ್ನು ನೀಡುವುದರಿಂದ ಜನರು ತಮ್ಮ ವ್ಯವಹಾರಗಳನ್ನು ಹೆಚ್ಚಾಗಿ ಸೊಸೈಟಿಯಲ್ಲಿ ನಡೆಸುತ್ತಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇತರ ಸಹಕಾರ ಸಂಘಗಳ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಇಂತಹ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ” ಎಂದರು .
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಜೈಬುನ್ನೀಸಾ ರವರು ಮಾತನಾಡಿ “ನ್ಯಾಯಾಂಗ ವ್ಯವಸ್ಥೆಯಲ್ಲಿ ಹೊಸ ಹೊಸ ಕಾನೂನುಗಳು, ನಿಯಮಗಳು ಜಾರಿಯಾಗುತ್ತಾ ಇದೆ. ಆದ್ದರಿಂದ ವ್ಯಾಜ್ಯಗಳನ್ನು ಬೇಗ ವಿಲೇವಾರಿ ಮಾಡಬೇಕು. ವಯಸ್ಕರ, ಅಪ್ರಾಪ್ತರ ಪ್ರಕರಣಗಳನ್ನು ಬೇಗ ಇತ್ಯರ್ಥಗೊಳಿಸಿ ಜನರಿಗೆ ಸಹಕರಿಸಬೇಕು. ಖಾಯಂ ಜನತಾ ನ್ಯಾಯಾಲಯದಲ್ಲಿ ಯಾವುದೇ ಕೋರ್ಟ್ ಶುಲ್ಕ ಇಲ್ಲದೇ ಪ್ರಕರಣಗಳನ್ನು ದಾಖಲಿಸಬಹುದಾಗಿದ್ದು, ಇದರಿಂದ ಸಹಕಾರಿ ಸಂಘಗಳಿಗೆ ತುಂಬಾ ಪ್ರಯೋಜನವಾಗಲಿದೆ” ಎಂದು ತಿಳಿಸಿ ಖಾಯಂ ಜನತಾ ನ್ಯಾಯಾಲಯದ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.
ಕಂಕನಾಡಿ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶ್ರೀ ಗುರುರಾಜ ರವರು ಮಾತನಾಡಿ ” ಎಲ್ಲಾ ಸಹಕಾರಿ ಸಂಘಗಳು ಭದ್ರತೆಯ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಚಿನ್ನಾಭರಣ ಸಾಲ ನೀಡುವಾಗ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಹಾಗೂ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಸಹಕಾರಿ ಸಂಘಗಳಲ್ಲಿ ಕೂಡಾ ಈಗ ವಕೀಲರ ಕೇಸ್‌ಗಳು ಹೆಚ್ಚಾಗಿದ್ದು , ಇದರ ಬಗ್ಗೆ ಎಲ್ಲರಿಗೂ ಸೂಕ್ತ ಕಾನೂನಿನ ಅರಿವು ಬೇಕಾಗಿದೆ. ನಕಲಿ ಚಿನ್ನಗಳನ್ನು ಮಧ್ಯವರ್ತಿಗಳ ಮುಖೇನ ಸೊಸೈಟಿಯಲ್ಲಿ ಅಡವು ಇಡುವುದರಿಂದ ಮೋಸ ಹೋಗುತ್ತಿದ್ದಾರೆ. ಈ ಬಗ್ಗೆ ನಾವು ಕೂಡಾ ಜಾಗೃತರಾಗಿರಬೇಕು ಎಂದು ಹೇಳಿದರು. ಸಹಕಾರ ಸಂಘಗಳ ಉನ್ನತಿಗೆ ಇಂತಹ ತರಬೇತಿಗಳ ಅಗತ್ಯವಿದ್ದು, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲಿ, ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ವಿಷಯಾಧಾರಿತ ತರಬೇತಿ ಕಾರ್ಯಾಗಾರವನ್ನು ಸಂಘದ ವತಿಯಿಂದ ಹಮ್ಮಿಕೊಳ್ಳಲಾಗುವುದು” ಎಂದರು.
ಈ ಕಾರ್ಯಾಗಾರದಲ್ಲಿ ಸಹಕಾರ ಸಂಘಗಳಿಗೆ ಸಂಬ೦ಧಿಸಿದ ಕಾನೂನು ವಿಚಾರಗಳು, ಸಂಘಗಳ ಭದ್ರತೆ ಮತ್ತು ಸುರಕ್ಷತಾ ಕ್ರಮಗಳು, ಕಾನೂನು ಸಮಸ್ಯೆಗಳಿಗೆ ಲಭ್ಯವಿರುವ ನೆರವು ಹಾಗೂ ಸಹಕಾರ ಸಂಘಗಳ ಸುಭದ್ರತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಜ್ಞರಿಂದ ಮಾಹಿತಿ ನೀಡಲಾಯಿತು. ಸಹಕಾರ ಸಂಘಗಳ ಕಾರ್ಯನಿರ್ವಹಣೆಯಲ್ಲಿ ಎದುರಾಗಬಹುದಾದ ಕಾನೂನು ಮತ್ತು ಸುರಕ್ಷತಾ ಸವಾಲುಗಳ ಕುರಿತು ಸಂವಾದಕ್ಕೂ ಅವಕಾಶ ಕಲ್ಪಿಸಲಾಗಿತ್ತು. ದ. ಕ ಹಾಗೂ ಉಡುಪಿ ಜಿಲ್ಲೆಯ ಹೆಚ್ಚಿನ ಸಹಕಾರ ಸಂಘಗಳ ಪದಾಧಿಕಾರಿಗಳು ಈ ಮಾಹಿತಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ ಶ್ರೀ ಸೀತರಾಮ್ ಎನ್, ಶ್ರೀ ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಖಾಯಂ ಜನತಾ ನ್ಯಾಯಾಲಯದ ಪ್ಯಾನೆಲ್ ವಕೀಲರಾದ ಶ್ರೀಮತಿ ಮಾನಸ ಹೆಗ್ಡೆ, ಪಾಲಿಸಿ ಗ್ರೇಸ್ ಇನ್ಶೂರೆನ್ಸ್ ಇದರ ಹಿರಿಯ ಉಪಾಧ್ಯಕ್ಷರಾದ ಶ್ರೀ ರಾಮ್ ಮನೋಹರ್ ರೈ , ಬ್ರಹ್ಮಶ್ರೀ ನಾರಾಯಣ ಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ನ ಗೌರವ ಅಧ್ಯಕ್ಷರಾದ ಶ್ರೀ ವಾಮನ್ ಕೆ. ಮತ್ತಿತರರು ಉಪಸ್ಥಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ ರವರು ವಂದಿಸಿದರು. ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್ ರವರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು