ಇತ್ತೀಚಿನ ಸುದ್ದಿ
Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮುಡಿಪು ಶಾಖೆಯ ಗ್ರಾಹಕರ ಸಭೆ
30/10/2025, 16:04
ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಡಿಪು ಶಾಖೆಯ ೯ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಮುಡಿಪು ಶಾಖೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಘದ ಸದಸ್ಯರಾದ ನವೀನ್ ಚಂದ್ರ, ಕಾಶೀಮ್ ಕೆ., ಕ್ಯಾತರಿನ್ ಡಿಸೋಜ ಹಾಗೂ ದುಶ್ಯಂತ ಅವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.
ಸಂಘದ ಸದಸ್ಯರಾದ ನವೀನ್ ಚಂದ್ರ ರವರು ಮಾತನಾಡಿ, “ಸಂಘದ ಸಿಬ್ಬಂದಿ ವರ್ಗದವರು ಉತ್ತಮ ರೀತಿಯಲ್ಲಿ ಗ್ರಾಹಕರಿಗೆ ಸೇವೆ ನೀಡುತ್ತಿರುವುದು ಸಂಘದ ಉನ್ನತಿಗೆ ಕಾರಣವಾಗಿದೆ. ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಗೆ ಸಂಘದ ಸದಸ್ಯರ ಆರೋಗ್ಯದ ಕಾಳಜಿಯಿಂದ ಉಚಿತ ವೈಧ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಇನ್ನು ಹೆಚ್ಚಿನ ಸೇವೆಯನ್ನು ಗ್ರಾಹಕರಿಗೆ ನೀಡುವಂತಾಗಲಿ” ಎಂದು ಆಶಿಸಿದರು.
ಸಂಘದ ಸದಸ್ಯರಾದ ಕಾಸಿಮ್ ಕೆ ಅವರು ಮಾತನಾಡಿ “ಸಂಘವು ಅತೀ ಕಡಿಮೆ ಅವಧಿಯಲ್ಲಿ ಸಾಧಿಸಿರುವ ಬೆಳವಣಿಗೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇನ್ನೂ ಹೆಚ್ಚಿನ ಶಾಖೆಯನ್ನು ತೆರೆಯುವಂತಾಗಲಿ” ಎಂದು ಶುಭ ಹಾರೈಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ಮುಡಿಪು ಶಾಖೆಯು ೯ನೇ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಶಾಖೆಯ ಪ್ರಗತಿಗೆ ಕಾರಣಿಕಾರ್ತರಾದ ಎಲ್ಲಾ ಗ್ರಾಹಕರಿಗೆ ಅಭಿನಂದನೆಯನ್ನು ಸಲ್ಲಿಸಿ, ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೧೦,೫೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿದ್ದು, ಗ್ರಾಹಕರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯವನ್ನು ನೀಡುತ್ತಿದ್ದೇವೆ. ಜನರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಶಿಬಿರವನ್ನು ಸಹ ಸತತವಾಗಿ ವಿವಿಧ ಸಂಘಗಳ ಸಹಯೋಗದೊಂದಿಗೆ ಹಮ್ಮಿಕೊಂಡು ಬರುತ್ತಿದ್ದೇವೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ಒಳ್ಳೆಯ ಅಂಕ ಬಂದಾಗ ವಿದ್ಯಾರ್ಥಿ ವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಿದ್ದೇವೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಸAಘದ ಮುಡಿಪು ಶಾಖೆಯ ಶಾಖಾಧಿಕಾರಿಯಾದ ನಿಶ್ಮಿತಾ ಸ್ವಾಗತಿಸಿದರು. ಪ್ರದೀಪ್ ವಂದಿಸಿದರು. ಸಿಬ್ಬಂದಿಯಾದ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.












