1:29 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಡುಬಿದ್ರಿ: ಉಚಿತ ನೇತ್ರ ತಪಾಸಣಾ ಶಿಬಿರ

08/11/2025, 13:29

ಮಂಗಳೂರು(reporterkarnataka com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರ‍್ರಿ ಇವರ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ನುರಿತ ವೈದ್ಯರ ತಂಡದವರಿಂದ ಉಚಿತ ನೇತ್ರ ತಪಾಸಣಾ ಶಿಬಿರವು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷರು ಹಾಗೂ ಅಡ್ವೆ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣರವರು ಉದ್ಘಾಟಿಸಿ, “ಉಭಯ ಜಿಲ್ಲೆಗಳಲ್ಲಿ ೩೩ಕ್ಕೂ ಮಿಕ್ಕಿ ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ, ಸಂಸ್ಥೆಯ ಲಾಭಾಂಶದ ಒಂದು ಪಾಲನ್ನು ಸಮಾಜದ ಅಶಕ್ತ ಬಡ ವರ್ಗದ ಜನರ ಏಳಿಗೆಗಾಗಿ ವಿನಿಯೋಗಿಸಿಕೊಂಡು ಬರುತ್ತಿದ್ದು, ಸಂಸ್ಥೆಯು ಸದಾ ಅಭಿವೃದ್ದಿ ಪಥದಲ್ಲಿ ಸಾಗಲಿ, ಸಾಮಾಜಿಕ ಸೇವೆ ನಿರಂತರವಾಗಿ ಮುಂದುವರಿಯಲಿ” ಎಂದು ಶುಭ ಹಾರೈಸಿದರು.
ಬಿಲ್ಲವ ಸಮಾಜ ಸೇವಾ ಸಂಘ (ರಿ) ಪಡುಬಿದ್ರಿ ಇದರ ಅಧ್ಯಕ್ಷರು ಹಾಗೂ ಪಡುಬಿದ್ರಿ ವ್ಯವಸಾಯಿಕ ಸೇವಾ ಸಹಕಾರಿ ಸಂಘ (ನಿ.) ಇದರ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್ ರವರು ಮಾತನಾಡಿ “ಸಹಕಾರಿ ಸಂಸ್ಥೆಗಳು ಕೇವಲ ಲಾಭದ ದೃಷ್ಟಿಯನ್ನು ಹೊಂದದೆ ಜೊತೆಗೆ ಜನರ ಆರೋಗ್ಯ ದೃಷ್ಟಿಯಿಂದ ಉಚಿತವಾಗಿ ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದಲ್ಲಿ ಇಂತಹ ತಪಾಸಣೆ ಯನ್ನು ಆಯೋಜಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆಲಸ ಶ್ಲಾಘನೀಯ. ಇವರಿಗೆ ಗ್ರಾಮದ ಜನತೆಯ ಪರವಾಗಿ ಕೃತಜ್ಞತೆಗಳು. ಸಾಮಾಜಿಕ ಕಳಕಳಿಯನ್ನು ಹೊಂದಿರುವ ಅತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಸ್ಥೆ ಇನ್ನಷ್ಟು ಅಭಿವೃದ್ಧಿ ಹೊಂದಲಿ” ಎಂದು ಶುಭ ಹಾರೈಸಿದರು.
ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲಯನ್ ಶ್ರೀ ಪ್ರಗತ್ ಶೆಟ್ಟಿ ಯವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ೯೨ನೇ ಆರೋಗ್ಯ ಶಿಬಿರವನ್ನು ಪಡುಬಿದ್ರಿ ಪರಿಸರದಲ್ಲಿ ನಡೆಸುತ್ತಿರುವ ಬಗ್ಗೆ ಸಂತಸ ವ್ಯಕ್ತ ಪಡಿಸಿ, ಮುಂದಕ್ಕೆ ನಡೆಯುವ ಯಾವುದೇ ಸಾಮಾಜಿಕ ಸೇವೆಗಳಲ್ಲಿ ತಾವು ಕೈಜೋಡಿಸುವುದಾಗಿ ಭರವಸೆಯನ್ನು ನೀಡಿದರು.
ಕಣ್ಣಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶ್ರೀಯುತ ಶೀನ ಪೂಜಾರಿ ಇವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಹಣಕಾಸು ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜನಸಾಮಾನ್ಯರ ಆರೋಗ್ಯದ ಕಾಳಜಿ ವಹಿಸಿ ಎಲ್ಲಾ ಶಾಖೆಗಳಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸುತ್ತಿರುವುದಕ್ಕೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಗೆ ಅಭಿನಂದನೆಯನ್ನು ಸಲ್ಲಿಸಿದರು”.
ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯರಾದ ಡಾ. ನಿರಂಜನ್ ರವರು ಮಾತನಾಡಿ “ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕನ್ನಡಕ್ಕ ವಿತರಣೆ ಹಾಗೂ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಮಾಡಲಾಗುವುದು ಎಂದು ಸಾರ್ವಜನಿಕರಿಗೆ ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡುತ್ತಾ ಬರುತ್ತಿದೆ. ಅದೇ ರೀತಿ ಇವತ್ತಿನ ಗುಣಮಟ್ಟದ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಇದರ ಆಡಳಿತ ವರ್ಗ, ವೈದ್ಯರು , ಸಿಬ್ಬಂದಿ ವರ್ಗದವರಿಗೂ ಹಾಗೂ ಎಲ್ಲಾ ಸಂಸ್ಥೆಯ ಪದಾದಿಕಾರಿಗಳಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ರಮನಾಥ್ ಸನಿಲ್, ಶ್ರೀ ಗೋಪಾಲ್ ಎಮ್., ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇಲ್ಲಿನ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶ್ರೀ ಮೋಹನ್ ಮತ್ತು ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಶಿಬಿರದಲ್ಲಿ ಸುಮಾರು ೨೦೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ನೇತ್ರ ತಪಾಸಣೆ, ಉಚಿತ ಕನ್ನಡಕ ವಿತರಣೆಯನ್ನು ನಡೆಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ರವರು ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ಚೈತ್ರ ದಿನೇಶ್ ರವರು ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಶಾಖಾಧಿಕಾರಿಯಾದ ಶ್ರೀಮತಿ ಸ್ವಾತಿ ಪ್ರದೀಪ್ ರವರು ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು