4:09 AM Thursday15 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಪಂಜಿಮೊಗರು ಶಾಖೆಯ ಗ್ರಾಹಕರ ಸಭೆ

12/11/2025, 12:23

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಂಜಿಮೊಗರು ಶಾಖೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಜಗದೀಶ್ ಸನಿಲ್, ಶ್ರೀ ಶ್ರೀಧರ್ ಪೂಜಾರಿ, ಶ್ರೀ ದಯಾನಂದ ಕುಮಾರ್, ಶ್ರೀ ಗಣೇಶ್ ಸನಿಲ್ ಹಾಗೂ ಶ್ರೀಮತಿ ಮೋಲಿ ಫೇರ್ನಾಂಡಿಸ್ ಅವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.
ಸಂಘದ ಸದಸ್ಯರಾದ ಶ್ರೀ ಕನಕದಾಸ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯ ಜೊತೆಯಲ್ಲಿ ಶೀಘ್ರಗತಿಯಲ್ಲಿ ಇ-ಸ್ಟಾಂಪಿಂಗ್ ಸೇವೆಯನ್ನು ನೀಡುತ್ತಿರುವುದು ಶ್ಲಾಘನೀಯ. ಹಾಗೂ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು”.
ಸದಸ್ಯರಾದ ಶ್ರೀಮತಿ ಫಾತಿಮತುಲ್ ಜೋಹರ ರವರು ಮಾತನಾಡಿ “ಸಂಘದ ಸಿಬ್ಬಂದಿಗಳ ನಗುಮೊಗದ ಗ್ರಾಹಕ ಸ್ನೇಹಿ ಸೇವೆಯಿಂದಾಗಿ ಸಂಘವು ಅಭಿವೃದ್ದಿ ಹೊಂದುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ಪಂಜಿಮೊಗರು ಶಾಖೆಯು ೯ನೇ ವರ್ಷದ ಸಂಭ್ರಮದೊಂದಿಗೆ ಮುನ್ನಡೆಯುತ್ತಿದೆ. ಠೇವಣಿ ಸಂಗ್ರಹಣೆಯೊಂದಿಗೆ ಸಾಲ ವಸೂಲಾತಿ ಕ್ರಮವು ಸರಿಯಾದ ಪ್ರಮಾಣದಲ್ಲಿ ಆದಾಗ ಮಾತ್ರ ಸಂಘದ ಬೆಳವಣಿಗೆ ಸಾಧ್ಯ. ಸಿಬ್ಬಂದಿ ವರ್ಗದವರ ಕಾರ್ಯ ವೈಖರಿ, ಗ್ರಾಹಕರ ಸಹಕಾರದೊಂದಿಗೆ ಪ್ರತಿ ವರ್ಷದಂತೆ ಈ ವರ್ಷವೂ ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘವು ಕಳೆದ ಮಾರ್ಚ್ ವರ್ಷಾಂತ್ಯಕ್ಕೆ ೧೮೨ ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲವನ್ನು ನೀಡಿದೆ. ಈಗಾಗಲೇ ಸಂಘವು ಈ ಸಾಲಿನ ಅರ್ಧ ಆರ್ಥಿಕ ವರ್ಷದಲ್ಲಿ ೧೫೩ ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲವನ್ನು ವಿತರಿಸಿದ್ದು, ಚಿನ್ನಾಭರಣ ಸಾಲ ನೀಡುವಿಕೆಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಿದೆ. ಅಗತ್ಯ ಸಂದರ್ಭಗಳಲ್ಲಿ ಹಿರಿಯ ನಾಗರಿಕ ಸದಸ್ಯರ ಮನೆಗೆ ಭೇಟಿ ನೀಡಿ, ಸೇವೆ ನೀಡುತ್ತಿದ್ದೇವೆ. ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲಗಳನ್ನು ನೀಡುತ್ತಿದ್ದೇವೆ ಹಾಗೂ ಸಂಘದ ಎಲ್ಲಾ ಶಾಖೆಯಲ್ಲಿ ಇ ಸ್ಟಾ÷್ಯಂಪ್ ಸೇವಾ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್, ಶ್ರೀ ಮುದ್ದು ಮೂಡುಬೆಳ್ಳೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ, ಶ್ರೀಮತಿ ವಿದ್ಯಾಶ್ರೀ ಯವರು ಸ್ವಾಗತಿಸಿ, ಕುಮಾರಿ ಗೌತಮಿ ಯವರು ವಂದಿಸಿದರು. ಪ್ರಭಾರ ಶಾಖಾಧಿಕಾರಿ ಶ್ರೀಮತಿ ಮಾಧವಿ ರವರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು