ಇತ್ತೀಚಿನ ಸುದ್ದಿ
ಮಂಗಳೂರು ಆಟೋ ಬ್ಲಾಸ್ಟ್: ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಥಳ ಪರಿಶೀಲನೆ; ಆಸ್ಪತ್ರೆಗೆ ಭೇಟಿ
23/11/2022, 12:02

ಮಂಗಳೂರು(reporterkarnataka.com): ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬುಧವಾರ ಮಂಗಳೂರಿಗೆ ಭೇಟಿ ನೀಡಿ ಆಟೋರಿಕ್ಷಾದಲ್ಲಿ ಸ್ಫೋಟ ನಡೆದ ನಗರದ ನಾಗೂರಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ನಂತರ ಅವರು ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕ ಹಾಗೂ ಶಂಕಿತ ಆರೋಪಿ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು.
ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಪೊಲೀಸ್ ಅಧಿಕಾರಿಗಳ ಜತೆ ಗೃಹ ಸಚಿವರು ಚರ್ಚೆ ನಡೆಸಿದರು.
ಶಾಸಕ ಭರತ್ ಶೆಟ್ಟಿ,ಡಿಜಿ ಪ್ರವೀಣ್ ಸೂದ್ ,ಜಿಲ್ಲಾಧಿಕಾರಿ ರವಿ.ಕುಮಾರ್ ಎಂ.ಆರ್ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.