ಇತ್ತೀಚಿನ ಸುದ್ದಿ
ಮಂಗಳೂರು ಆಟೋ ಬ್ಲಾಸ್ಟ್ ಆರೋಪಿಯ ಮಾಹಿತಿ ಲಭ್ಯ: ಶಿವಮೊಗ್ಗ ತುಂಗಾ ಸ್ಫೋಟಕ್ಕೆ ನಂಟು
20/11/2022, 23:05

ಮಂಗಳೂರು(reporterkarnataka.com): ನಗರದ ನಾಗೂರಿ ಬಳಿ ಶನಿವಾರ ಮುಸ್ಸಂಜೆ ವೇಳೆ ನಡೆದ ಆಟೋರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಲಭಿಸುತ್ತಿದ್ದು, ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕುಖ್ಯಾತ ಕ್ರಿಮಿನಲ್ ಶಾರೀಕ್ ಎಂಬಾತನೇ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಮಾಡಿರುವುದು ಎಂಬ ಅಚ್ಚರಿಯ ಮಾಹಿತಿ ಲಭ್ಯವಾಗಿದೆ.
ಮಂಗಳೂರಿನಲ್ಲಿ ಆಟೋದಲ್ಲಿ ಸ್ಫೋಟ ಮಾಡಿದ್ದ ವ್ಯಕ್ತಿ ನಕಲಿ ಆಧಾರ್ ವಿಳಾಸ ನೀಡಿದ್ದು ಸ್ಪಷ್ಟವಾಗುತ್ತಿದ್ದಂತೆ ಆರೋಪಿಯ ಬೆನ್ನು ಹತ್ತಿದ ಪೊಲೀಸರು ಕೊನೆಗೂ ಆತ ಯಾರು ಎಂಬುದನ್ನು ಪತ್ತೆ ಹಚ್ಚಿದ್ದಾರೆ.
ಇತ್ತೀಚೆಗೆ ತುಂಗಾ ನದಿಯ ತಟದಲ್ಲಿ ಬಾಂಬ್ ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಸೆಪ್ಟೆಂಬರ್ 19 ರಂದು ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್(21) ಮತ್ತು ಮಂಗಳೂರಿನ ಮಾಜ್ ಮುನೀನ(22) ಎಂಬವರನ್ನು
ಬಂಧಿಸಿದ್ದರು. ಆದರೆ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ಶಾರೀಕ್ ನಾಪತ್ತೆಯಾಗಿದ್ದ.
ನಾಪತ್ತೆಯಾಗಿದ್ದ ಈತನ ಬಂಧನಕ್ಕೆ ಪೊಲೀಸರು ಸಾಕಷ್ಟು ಬಲೆ ಬೀಸಿದ್ದರೂ, ತನಿಖೆ ನಡೆಸಿದ್ದರೂ ಸಿಕ್ಕಿ ಬಿದ್ದಿರಲಿಲ್ಲ. ಆದರೆ ಈಗ ಮಂಗಳೂರಿನಲ್ಲಿ ಆಟೋ ಸ್ಫೋಟ ಪ್ರಕರಣದ ಮೂಲಕ ಸಿಕ್ಕಿ ಬಿದ್ದಿದ್ದಾನೆ.
ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ಶಾರೀಕ್‌ಗೆ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಬೈಲ್, ವಾಟ್ಸಪ್ ಮೂಲಕ ಸಂವಹನ ನಡೆಸದೇ ಟೆಲಿಗ್ರಾಮ್, ಸಿಗ್ನಲ್ ಇತ್ಯಾದಿ ಮೆಸೆಂಜರ್ ಆಪ್ ಇವರು ಬಳಸುತ್ತಿದ್ದರು. ಯಾಸಿನ್ ಮತ್ತು ಮಾಜ್ ಮುನೀರ್ ಪಿಯುಸಿ ಸ್ನೇಹಿತರು. ಇವರ ಜೊತೆ ಶಾರೀಕ್ ಐಪಿಸ್ ಚಟುವಟಿಕೆಯ ಬಗ್ಗೆ ಮಾಹಿತಿ ಕಳುಹಿಸುತ್ತಿದ್ದ ಆರೋಪಿಗಳ ಬಾಂಬ್ ತಯಾರಿಸುವ ಪಿಡಿಎಫ್ ಫೈಲ್, ಐಸಿಸ್ ಉಗ್ರರು ತಲೆ ಕಡಿಯುವ ಮತ್ತು ಜೀವಂತವಾಗಿ ಸುಡುವ ವೀಡಿಯೋಗಳು ಲಭ್ಯವಾಗಿದೆ.
ಇವರು ಐಸಿಸ್ ಜೊತೆ ನೇರವಾಗಿ ಸಂವಹನ ನಡೆಸಿರಲಿಲ್ಲ. ಆದರೆ ಐಸಿಸ್ ಟೆಲಿಗ್ರಾಮ್ ಚಾನೆಲ್‌ನ ಸದಸ್ಯರಾಗಿದ್ದರು ಎನ್ನಲಾಗಿದೆ.
ಇದೀಗ ಅಮದು ನಡೆದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಾರಿಕ್
ಇದೀಗ ನಿನ್ನೆ ನಡೆದ ಆಟೋ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಾನಾಗಿಯೇ ಕೈ ಪ್ರಯಾಣಿಕನಾಗಿ ಬಂದಿದ್ದವನು ಇವನೇ ಎಂದು ಹೇಳಲಾಗುತ್ತಿದೆ.