ಇತ್ತೀಚಿನ ಸುದ್ದಿ
Mangaluru | ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧ ಆಯ್ಕೆ
04/09/2025, 21:12

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧ ಆಯ್ಕೆಯಾಗಿದ್ದಾರೆ.
ನಗರದ ಹಂಪನಕಟ್ಟೆಯಲ್ಲಿರುವ “ಮಿಲಾಗ್ರಿಸ್ ಸೆನೆಟ್ ಹಾಲ್” ಸಭಾಂಗಣದಲ್ಲಿ ದ.ಕ. ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ನಡೆಯಿತು. ಈ ಸಭೆಯಲ್ಲಿ ದ. ಕ. ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇವರು ಸತತ ಮೂರನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರು ದ.ಕ.ಬಸ್ಸು ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿಯೂ, ಅಧ್ಯಕ್ಷರಾಗಿಯೂ ಹಾಗೂ ಪೂರ್ವ ವಲಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.