11:47 AM Sunday6 - April 2025
ಬ್ರೇಕಿಂಗ್ ನ್ಯೂಸ್
Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ… Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ

ಇತ್ತೀಚಿನ ಸುದ್ದಿ

Mangaluru | ದೇಶ, ಆಹಾರದ ಭದ್ರತೆಗೆ ಹೋರಾಡಿದ ಮಹಾನ್ ನಾಯಕ ಬಾಬೂಜಿ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

05/04/2025, 23:59

ಮಂಗಳೂರು(reporterkarnataka.com): ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆ ಹಾಗೂ ನಾಗರಿಕರಿಗೆ ಆಹಾರ ಭದ್ರತೆಗಾಗಿ ಅಹರ್ನಿಶಿ ದುಡಿದ ಮಹಾನ್ ವ್ಯಕ್ತಿ ಡಾ. ಬಾಬು ಜಗಜೀವನ್ ರಾಂ ರವರು ಆಗಿದ್ದಾರೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂರವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ದೇಶದ ಕೃಷಿ ಸಚಿವರಾಗಿ ಬಾಬೂಜಿಯವರು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹಸಿರು ಕ್ರಾಂತಿಯ ಯೋಜನೆಗೆ ಬೆನ್ನೆಲುಬಾಗಿ ನಿಂತು ದೇಶದ ಕೃಷಿ ಕ್ಷೇತ್ರದಲ್ಲಿ ಅದ್ಭುತ ಪ್ರಗತಿಗೆ ಕಾರಣರಾಗಿದ್ದಾರೆ. ಆಹಾರಕ್ಕಾಗಿ ನಾಗರಿಕರು ಸಂಕಟಪಡುತ್ತಿದ್ದ ಕಾಲವನ್ನು ಆಹಾರ ಧಾನ್ಯಗಳ ಹೆಚ್ಚುವರಿ ಸಂಗ್ರಹವಾಗಿ ಪರಿವರ್ತಿಸಲು ಬಾಬೂಜಿ ಸೇವೆ ಸಲ್ಲಿಸಿದ್ದಾರೆ ಎಂದು ಉಸ್ತುವಾರಿ ಸಚಿವರು ಸ್ಮರಿಸಿದರು.
ಕೇಂದ್ರ ರಕ್ಷಣಾ ಸಚಿವರಾಗಿ ಬಾಪೂಜಿಯವರು ದೇಶದ ಗಡಿಗಳನ್ನು ಬಾಹ್ಯ ಬೆದರಿಕೆಯಿಂದ ಮುಕ್ತಗೊಳಿಸಿದರು. ವಿಶೇಷವಾಗಿ ಬಾಂಗ್ಲಾ ಯುದ್ಧ ಸಂದರ್ಭದಲ್ಲಿ ಅವರ ನಾಯಕತ್ವ ದೇಶದ ರಕ್ಷಣೆಗೆ ಸಾಕಷ್ಟು ಪರಿಣಾಮ ಬೀರಿತು. ಕಾರ್ಮಿಕ ಸಚಿವರಾಗಿಯೂ ಸೇವೆ ಸಲ್ಲಿಸಿದ ಬಾಪೂಜಿಯವರು ಇಎಸ್‍ಐ ವ್ಯವಸ್ಥೆಯನ್ನು ಜಾರಿಗೆ ತರಲು ಶ್ರಮಿಸಿದರು. ಅಲ್ಲದೆ ಹಲವಾರು ಕಾರ್ಮಿಕಪರ ಕಾನೂನುಗಳನ್ನು ಜಾರಿಗೆ ತರಲು ಶ್ರಮಿಸಿದರು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸಮಾರಂಭದಲ್ಲಿ ಮೀನುಗಾರಿಕೆ ಕಾಲೇಜಿನ ಪ್ರಾಧ್ಯಾಪಕ ಡಾ.ಶಿವಕುಮಾರ್ ಮಗದ ಅವರು ವಿಶೇಷ ಉಪನ್ಯಾಸ ನೀಡಿದರು.
ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ. ಬಿ. ಎಸ್. ಹೇಮಲತಾ ಸ್ವಾಗತಿಸಿ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು