11:10 AM Saturday3 - May 2025
ಬ್ರೇಕಿಂಗ್ ನ್ಯೂಸ್
Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ Mangaluru | ಹುಟ್ಟೂರು ಬಂಟ್ವಾಳದತ್ತ ಸುಹಾಸ್ ಶೆಟ್ಟಿ ಪಾರ್ಥಿವ ಶರೀರ ಮೆರವಣಿಗೆ: ಬಿಗಿ… ಸುಹಾಸ್ ಶೆಟ್ಟಿ ಕೊಲೆ: ದ.ಕ. ಬಂದ್ ಗೆ ವಿಎಚ್ ಪಿ, ಭಜರಂಗದಳ ಕರೆ Breaking : ಬಜಪೆ : ಮಾರಕಾಯುಧಗಳಿಂದ ಹೊಡೆದು ಯುವಕನ ಕೊಲೆ ಕಾಂಗ್ರೆಸ್ ಪಕ್ಷದ ಜಾತಿ ಗಣತಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದು ಖರ್ಗೆ, ರಾಹುಲ್… Agricultur | ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ…

ಇತ್ತೀಚಿನ ಸುದ್ದಿ

ಮಂಗಳೂರು ಬಂದ್: ವಾಹನ ಸಂಚಾರ ಸ್ಥಗಿತ: ಎಡಿಜಿಪಿ ಆಗಮನ; ಬಿಗಿ ಬಂದೋಬಸ್ತ್

02/05/2025, 10:27

ಮಂಗಳೂರು(reporterkarnataka.com): ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದ.ಕ‌‌. ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಆಚರಿಸಲಾಯಿತು.
ಈ ಮಧ್ಯೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಆರ್. ಹಿತೇಂದ್ರ ಮಂಗಳೂರಿಗೆ ಆಗಮಿಸಿದ್ದಾರೆ.

ನಗರದಲ್ಲಿ ಖಾಸಗಿ ಬಸ್, ಆಟೋ, ಟ್ಯಾಕ್ಸಿ ರೋಡಿಗೆ ಇಳಿದಿಲ್ಲ. ಕೆಎಸ್ಸಾರ್ಟಿಸಿ ಬಸ್ ಸಂಚಾರ ಬೆಳಗ್ಗೆ ಆರಂಭವಾದರೂ ನಂತರ ನಿಲ್ಲಿಸಲಾಯಿತು. ಖಾಸಗಿ ವಾಹನಗಳು ಬೆರಳೆಣಿಕೆ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿದ್ದವು. ಹೊರ ಜಿಲ್ಲೆಗಳಿಂದ ಮಂಗಳೂರು ನಗರದೊಳಗೆ ಪ್ರವೇಶಿಸುವ ಕೆಎಸ್ಸಾರ್ಟಿಸಿ ಬಸ್ ಗಳನ್ನು ಪಡೀಲ್ ಬಳಿ ತಡೆಯಲಾಯಿತು. ಈ ಹಿನ್ನೆಲೆಯಲ್ಲಿ ನಂತರ ಬಂದ ಕೆಎಸ್ಸಾರ್ಟಿಸಿ ಬಸ್ ಗಳನ್ನು ಬಿ.ಸಿ. ರೋಡಿನಲ್ಲೇ ತಂಗಬೇಕಾಯಿತು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು