5:52 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Mangaluru | ದ್ವೇಷರಹಿತ ಸಮಾಜಕ್ಕೆ ಬಸವಣ್ಣ ಸಂದೇಶ ಅಗತ್ಯ: ಜಿಪಂ ಸಿಇಓ ಡಾ.ಕೆ.ಆನಂದ್

30/04/2025, 20:23

ಮಂಗಳೂರು(reporterkarnataka.com): ಎಲ್ಲರೂ ಸಮಾನರಾಗಿ ಬಾಳಿ ಬದುಕಿ, ಸಂಘರ್ಷರಹಿತ ಮತ್ತು ದ್ವೇಷರಹಿತ ಸಮಾಜ ನಿರ್ಮಾಣಕ್ಕೆ ಬಸವೇಶ್ವರರ ಸಂದೇಶ ಇಂದಿನ ಅಗತ್ಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಆನಂದ್ ಹೇಳಿದ್ದಾರೆ.
ಅವರು ಬುಧವಾರ ತುಳುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂಖದ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಸಹಕಾರದೊಂದಿಗೆ ನಡೆದ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಸವಣ್ಣನವರ ತತ್ವಗಳು ಸದಾ ನಮ್ಮೊಂದಿಗೆ ಇರಬೇಕು. ಸಾಮಾಜಿಕ ಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಪ್ರತಿಪಾದಿಸಿದ್ದ ಅವರು, ಮನುಷ್ಯರಲ್ಲಿ ಮೇಲು ಕೀಳು ಎಂಬ ನಿಲುವನ್ನು ಕಠುವಾಗಿ ವಿರೋಧಿಸಿದ್ದರು. ಇದುವೇ ಉತ್ತಮ ಸಮಾಜಕ್ಕೆ ಬುನಾಧಿಯಾಯಿತು ಎಂದು ಅವರು ಹೇಳಿದರು.
ಬಸವಣ್ಣನವರು ಸಂಸ್ಥಾಪಿಸಿದ್ದ ಅನುಭವ ಮಂಟಪವು ಜಗತ್ತಿನ ಮೊದಲ ಸಂಸತ್ ಎಂದೇ ಪ್ರಸಿದ್ಧಿಯಾಗಿದೆ. ಇದು ಸಂಸದೀಯ ವ್ಯವಸ್ಥೆಗೆ ದೊಡ್ಡ ಕೊಡುಗೆ ನೀಡಿತು. ಶ್ರಮ ಮತ್ತು ಸೇವೆಯ ಮೇಲೆ ಅಪಾರ ನಂಬಿಕೆ ಇಟ್ಟಿದ್ದ ಅವರು, ಸಮಾಜದ ಪ್ರಗತಿಗೆ ಇದು ಪ್ರಮುಖ ಆಧಾರ ಎಂದು ಪ್ರತಿಪಾದಿಸಿದ್ದರು ಎಂದು ಜಿಪಂ ಸಿಇಓ ತಿಳಿಸಿದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ಡಾ. ಪೂವಪ್ಪ ಕಣಿಯೂರು ಅವರು ಉಪನ್ಯಾಸ ನೀಡಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಎಸ್. ಗುರುಮೂರ್ತಿ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಸ್ವಾಗತಿಸಿದರು. ರೇಣುಕಾ ಕಣಿಯೂರು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು