ಇತ್ತೀಚಿನ ಸುದ್ದಿ
ಮಂಗಳೂರು ಭೇಟಿ ಮುಗಿಸಿ ಹಿಂತಿರುಗುತ್ತಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ: 3 ಮಂದಿಗೆ ಗಾಯ
02/08/2022, 10:51
ತುಮಕೂರು(reporterkarnataka.com): ಮಂಗಳೂರು ಭೇಟಿ ಮುಗಿಸಿ ಹಿಂತಿರುಗುತ್ತಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ 3 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಕುಣಿಗಲ್ ಸಮೀಪದ ತಿಪ್ಪೂರು ಗೇಟ್ ಬಳಿ ಸೋಮವಾರ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಘಟನೆ ನಡೆದಿದೆ. ಬೆಂಗಾವಲು ವಾಹನ ರಸ್ತೆಯ ತಡೆಗೋಡೆಗೆ ಗುದ್ದಿ ರಸ್ತೆಯಿಂದಾಚೆಗೆ ನುಗ್ಗಿದೆ. ಪರಿಣಾಮ ವಾಹನದಲ್ಲಿದ್ದ 5 ಮಂದಿಯಲ್ಲಿ ಮೂವರಿಗೆ ಗಾಯಗಳಾಗಿವೆ.
ಗಾಯಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಮಹೇಶ್, ಮಂಜುನಾಥ್ ಹಾಗೂ ಆನಂದ್ ಹರೀಶ್ ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.