9:28 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಂಗಳೂರು ಬೆಸೆಂಟ್ ಸಂಧ್ಯಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

01/02/2022, 21:58

ಮಂಗಳೂರು(reporterkarnataka.com): ಕೋವಿಡ್ 19ರ ಮಹಾಮಾರಿಯಿಂದ ಜನರು ತತ್ತರಿಸಿ ಹೋದ ಈ ಸಂದರ್ಭದಲ್ಲಿ ರಕ್ತದಾನದಂತಹ ಮಹತ್ಕಾರ್ಯವನ್ನು ಕೈಗೊಂಡು ನೂರಾರು ಜನರ ಬಾಳಿಗೆ ಆಶಾದೀಪವಾಗಿರುವ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ನಗರಪಾಲಿಕೆಯ ಕಾರ್ಪೊರೇಟರ್ ಹಾಗೂ ಲೆಕ್ಕ ಪತ್ರ ಸ್ಥಾಯೀ ಸಮಿತಿ ಅಧ್ಯಕ್ಷ ಲೀಲಾವತಿ ಪ್ರಕಾಶ್ ಹೇಳಿದರು. 

ಅವರು ಬೆಸೆಂಟ್ ಸಂಧ್ಯಾ ಹಳೆ ವಿದ್ಯಾರ್ಥಿ ಸಂಘ (ರಿ) ಹಾಗೂ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆ ಅಂಬೇಡ್ಕರ್ ವೃತ್ತ ಮಂಗಳೂರು ಇದರ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ ಬೆಸಂಟ್ ಸಂಧ್ಯಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಸಂಚಾಲಕ ಗಣೇಶ ಕೃಷ್ಣ ಭಟ್ ಹಾಗೂ ಪ್ರಾಂಶುಪಾಲ ಡಾ. ಲಕ್ಷ್ಮಿ ನಾರಾಯಣ ಭಟ್ ಅವರು ಕಾರ್ಯಕ್ರಮಕ್ಕೆ ಶುಭವನ್ನು ಕೋರಿದರು. ಹಳೆ ವಿದ್ಯಾರ್ಥಿ ಪ್ರದೀಪ್ ಸ್ವಾಗತಿಸಿದರು. ಡಾ. ಸೌಮ್ಯ ಗುಪ್ತ ರಕ್ತದಾನದ ಮಹತ್ವ ಮತ್ತು ರಕ್ತದಾನಕ್ಕೆ ಯಾರು ಅರ್ಹರು ಎಂಬ ಬಗ್ಗೆ ವಿವರಿಸಿದರು.  

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಮೊದಲಿಯಾರ್,  ಸಲಹೆಗಾರ ಶ್ರೀ ಗಣಪತಿ ಭಟ್ ಎಂ. ಉಪಸ್ಥಿತರಿದ್ದರು. ಪದ್ಮಜ ಪ್ರಾರ್ಥಿಸಿದರು. ಕಾರ್ಯದರ್ಶಿ ರಾಜೇಶ್ ಮೊದಲಿಯಾರ್ ವಂದಿಸಿದರು. ಯೋಗೀಶ್ ಶರ್ಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು