ಇತ್ತೀಚಿನ ಸುದ್ದಿ
ಮಂಗಳೂರಿನ ಬಿಲ್ಡರ್ ಆತ್ಮಹತ್ಯೆ: ಅಪಾರ್ಟ್ ಮೆಂಟಿನ 17ನೇ ಮಹಡಿಯಿಂದ ಹಾರಿ ಸಾವಿಗೆ ಶರಣು
06/08/2023, 22:33
ಮಂಗಳೂರು(reporterkarnataka.com): ನಗರದ ಬಿಲ್ಡರ್ ವೊಬ್ಬರು ಬೆಂದೂರ್ ವೆಲ್ ನ ತನ್ನ ಅಪಾರ್ಟ್ ಮೆಂಟಿನ ಮಹಡಿಯಿಂದ ಹಾರಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಕ್ವಾರಿ, ಬಿಲ್ಡರ್ ಉದ್ಯಮ ನಡೆಸುತ್ತಿದ್ದ ಮೋಹನ್ ಅಮೀನ್ (62) ಸಾವಿಗೆ ಶರಣಾದ ಉದ್ಯಮಿ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ವಿಜಯವಾಹಿನಿ ಕನ್ ಸ್ಟ್ರಕ್ಷನ್ ಹೆಸರಿನಲ್ಲಿ ಟಿಪ್ಪರ್, ಕ್ವಾರಿ, ಜಲ್ಲಿ ಬ್ಯುಸಿನೆಸ್ ನಡೆಸುತ್ತಿದ್ದ ಅವರು
ನಗರದ ಬೆಂದೂರು ವೆಲ್ ನಲ್ಲಿರುವ ಅಟ್ಲಾಂಟಿಕ್ ಅಪಾರ್ಟ್ ಮೆಂಟಿನ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಹೊರಗೆ ಹೋಗಿದ್ದ ಮೋಹನ್ ಅಮೀನ್ ತಮ್ಮ ಮನೆ ಇರುವ ಅಟ್ಲಾಂಟಿಕ್ ಅಪಾರ್ಟೆಂಟಿಗೆ ಬಂದು 17ನೇ ಮಹಡಿಯಿಂದ ಜಿಗಿದಿದ್ದಾರೆ. ತಲೆಯ ಭಾಗ ಸಂಪೂರ್ಣ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ನನ್ನ ಸಾವಿಗೆ ನಾನೇ ಕಾರಣ. ಪತ್ನಿ, ಮಕ್ಕಳಿಗೆ ಸಾರಿ ಎಂದಷ್ಟೇ ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಕದ್ರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.