11:31 AM Thursday24 - September 2026
ಬ್ರೇಕಿಂಗ್ ನ್ಯೂಸ್
ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ…

ಇತ್ತೀಚಿನ ಸುದ್ದಿ

ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು

05/03/2026, 19:33

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಶಿರಸಿ-ಯಲ್ಲಾಪುರ ರಸ್ತೆಯ ಬೇಡ್ತಿ ಸಮೀಪದ ಮಳಲಗಾವ್ ನಲ್ಲಿ ಕರ್ನಾಟಕ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಲ್ಲಿ ಮ್ಯಾಕ್ಸ್ ಇನ್ಫಾಟೆಸ್ ಹಾಗೂ ಇನ್ನಿತರ ಸಂಸ್ಥೆ ನಡೆಸುತ್ತಿದ್ದ ಮುಕೇಶ್ ಶೆಟ್ಟಿ (44) ಸಾವನ್ನಪ್ಪಿದ ದುರ್ದೈವಿ. ಮುಕೇಶ್ ಶೆಟ್ಟಿ ಕರ್ತವ್ಯ ನಿಮಿತ್ತ ಮಂಗಳೂರಿನಿಂದ ಶಿರಸಿ ಕಡೆ ತೆರಳುತ್ತಿದ್ದ ವೇಳೆ ಬೆಳಗಾವಿಯಲ್ಲಿ ಮದುವೆಗೆಂದು ಒಪ್ಪಂದದ ಮೇರೆಗೆ ತೆರಳುತ್ತಿದ್ದ ಸಾರಿಗೆ ಬಸ್ ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಮುಕೇಶ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಸ್ಥಳೀಯರ ಸಹಾಯದಿಂದ ಮಂಗಳೂರಿಗೆ ರವನಿಸಲಾಗಿತ್ತು. ಇತ್ತ ಬಸ್ ನಲ್ಲಿದ್ದಾವ್ರಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು