9:48 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಂಗಳೂರು: ಸಿ.ಟಿ. ರವಿ, ಮಾಧುಸ್ವಾಮಿ ವಿರುದ್ಧ ತುಳು ಸಂಘಟನೆ ಪ್ರತಿಭಟನೆ; ಜೆಡಿಎಸ್ ಮುಖಂಡೆ ಸುಮತಿ ಹೆಗ್ಡೆ ಸಾಥ್

25/02/2023, 19:40

ಮಂಗಳೂರು(reporterkarnataka.com): ಮಾಂಸಾಹಾರ ತಿಂದು ನಾಗಬನ ಪಾವಿತ್ರ್ಯಕ್ಕೆ ಧಕ್ಕೆ ತಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಲಘುವಾಗಿ ಮಾತನಾಡಿದ ಸಚಿವ ಮಾಧುಸ್ವಾಮಿ ವಿರುದ್ಧ ತುಳುನಾಡಿನ‌ ದೈವಾರಾಧನೆ ಸಂರಕ್ಷಣೆ ಯುವ ವೇದಿಕೆ ಆಶ್ರಯದಲ್ಲಿ ನಗರದ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಸಲಾಯಿತು. ಜೆಡಿಎಸ್ ಮುಖಂಡೆ ಸುಮತಿ ಹೆಗ್ಡೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತುಳುನಾಡಿನ ದೈವ ಭಾಷೆ ಹಾಗೂ ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವನ್ನು ಕುಹಕವಾಡಿದ ಬಿಜೆಪಿಯ ಸಚಿವ ಮಾಧುಸ್ವಾಮಿ ಹಾಗೂ‌ ನಾಗಬನಗಳಿಗೆ ಮಾಂಸಾಹಾರ ತಿಂದು ಬನಗಳ ಪಾವಿತ್ರ್ಯತೆಗೆ ಧಕ್ಕೆ ತಂದಿರುವುದೂ ಮಾತ್ರವಲ್ಲ ಗುಳಿಗೆ ಪಂಜುರ್ಲಿ ನಮ್ಮ ಪಕ್ಷದ ಪರ ಎಂದು ಸಿ.ಟಿ.ರವಿಯವರ ಹೇಳಿಕೆಯ ವಿರುಧ್ದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತ್ರತ್ವವನ್ನು ತುಳುನಾಡ ದೈವಾರಾಧನೆ ರಕ್ಷಣಾ ವೇದಿಕೆ ಹಮ್ಮಿಕೊಂಡಿದ್ದು ,‌ ಮಂಗಳೂರು‌ ದಕ್ಷಿಣ ಕ್ಷೇತ್ರ ಜೆಡಿಎಸ್ ಅಭ್ಯರ್ಥಿ ಡಾ‌.ಸುಮತಿ ಎಸ್‌ ಹೆಗ್ಡೆ ಸಾಥ್ ನೀಡಿದರು. ಈ‌ ಸಂಧರ್ಭ ಮಂಗಳೂರು‌ ದಕ್ಷಿಣ ಕ್ಷೇತ್ರ ಜೆಡಿಎಸ್ ಪ್ರ.‌ ಕಾರ್ಯದರ್ಶಿ ಅಲ್ತಾಫ್ ತುಂಬೆ, ಜಾವೇದ್ ಪಾಂಡೇಶ್ವರ , ಕವಿತಾ, ಮನೋಜ್ ಕುಮಾರ್ ,ಸುನಿತಾ ಹಾಗೂ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು