10:11 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

Mangaluru | ಕೆನರಾ ಬ್ಯಾಂಕಿನಿಂದ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ

16/08/2025, 18:30

ಮಂಗಳೂರು(reporterkarnataka.com): ಕೆನರಾ ಬ್ಯಾಂಕ್ ಡಾ. ಅಂಬೇಡ್ಕರ್ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಂಗಳೂರಿನ ಕೇಂದ್ರ ವೃತ್ತ ಕಚೇರಿಯಲ್ಲಿ ನಡೆಯಿತು.
ಶಿಕ್ಷಣಕ್ಕಾಗಿ ಒಟ್ಟು 45,786 ವಿದ್ಯಾರ್ಥಿನಿಯರಿಗೆ ಮತ್ತು 2600 ಅಧಿಕ ಶಾಲೆಗಳಿಗೆ ಸುಮಾರು 1824.68 ಲಕ್ಷ ವಿದ್ಯಾರ್ಥಿ ವೇತನವನ್ನು ಭಾರತಾದ್ಯಂತ ನೀಡುವ ಮೂಲಕ ಬೆಂಬಲಿಸಲಾಯಿತು. ದೇಶದ ಯುವ ಮನಸುಗಳನ್ನು ಸಬಲೀಕರಣಗೊಳಿಸುವ ಮತ್ತು ಹಿಂದುಳಿದ ಪ್ರತಿಭಾವಂತ ಎಸ್ ಸಿ ಎಸ್ ಟಿ ಬಾಲಕಿಯರಿಗೆ ವಿದ್ಯಾರ್ಥಿವೇತನವನ್ನು ನೀಡುವುದರ ಮೂಲಕ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಧಿಸುವಲ್ಲಿ ಸಹಾಯ ಮಾಡುವ ಗುರಿಯನ್ನು ಕೆನರಾ ಬ್ಯಾಂಕ್, ಭಾರತಾದ್ಯಂತ 26 ವೃತ್ತ ಕಚೇರಿಗಳಲ್ಲಿ 177 ಪ್ರಾದೇಶಿಕ ಕಚೇರಿಗಳಲ್ಲಿ ಮತ್ತು 7660ಕ್ಕೂ ಹೆಚ್ಚು ಶಾಖೆಗಳಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿ ವೇತನದ ಯೋಜನೆಯ ಹೊರತಾಗಿ ಕೆನರಾ ಬ್ಯಾಂಕ್ ಸಿ ಎಸ್ ಆರ್ ಕಾರ್ಯಕ್ರಮದಲ್ಲಿ ಗ್ರಾಮೀಣ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ನಿರ್ಮಾಣ, ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸಿದೆ ಎಂದು ಅಧ್ಯಕ್ಷತೆಯನ್ನು ವಹಿಸಿದ ಬ್ಯಾಂಕಿನ ಜನರಲ್ ಮ್ಯಾನೇಜರ್ ಮಂಜುನಾಥ್ ಬಿ. ಸಿಂಗೈ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ಬಿ.ಎಸ್. ಹೇಮಲತಾ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು ಎಜಿಎಂ ಸಂಜಯ್ ಕುಮಾರ್ ತ್ರಿವೇದಿ, ಡೆಪ್ಯುಟಿ ಜನರಲ್ ಮ್ಯಾನೇಜರ್ ಲತಾ ಕುರುಪ್ , ಮತ್ತು ಶೈಲೇಂದ್ರನಾಥ್ ಶೀತ್, ವ್ಯವಸ್ಥಾಪಕರಾದ ತುಶಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ವ್ಯವಸ್ಥಾಪಕಿ ಸ್ವಾತಿ ಕೆ. ಸ್ವಾಗತಿಸಿದರು. ಸಂಜಯ್ ಕುಮಾರ್ ತ್ರಿವೇದಿ ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು