3:11 AM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ  ಜೂನ್ 26ರಂದು ‘ಗುರುನಮನ’

23/06/2022, 20:38

ಮಂಗಳೂರು(reporterkarnataka.com): ಶತಮಾನ ಪರಂಪರೆ ಹೊಂದಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾದ ಮತ್ತು ಘನತೆಯ ಗುರುನಮನ ಕಾರ್ಯಕ್ರಮ ನಗರದ ಕೊಡಿಯಾಲಬೈಲ್ ಟಿ.ವಿ.ರಮಣ ಪೈ ಸಭಾಭವನದಲ್ಲಿ ಜೂನ್ 26ರಂದು ಬೆಳಗ್ಗೆ 9.30ರಿಂದ ನಡೆಯಲಿದೆ.

ಕೆನರಾ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಶಿಕ್ಷಕೇತರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಕೆನರಾ ಶಿಕ್ಷಣ ಸಂಸ್ಥೆಗಳ ವಿವಿಧ ಸಂಘಗಳ ಸಹಯೋಗದಿಂದ ನಡೆಯುವ ಈ ಗುರುನಮನ ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ನಿವೃತ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ರಂಗನಾಥ ಭಟ್ ಹಾಗೂ.ಹಿರಿಯ ಪತ್ರಕರ್ತರು ಮತ್ತು ಕೆನರಾ ಹಳೆ ವಿದ್ಯಾರ್ಥಿ ಮನೋಹರ ಪ್ರಸಾದ್ ತಿಳಿಸಿದರು.

ಸಂಸ್ಥೆಗಳಲ್ಲಿ ಈಗ ಲಭ್ಯವಿರುವ ದಾಖಲೆ ಪತ್ರಗಳನ್ನು ಆಧರಿಸಿ ಅವರಿಗೆ ಆಹ್ವಾನ ಪತ್ರ ಕಳುಹಿಸಲಾಗಿದೆ. ಅವರಲ್ಲಿ ಅತ್ಯಂತ ಹಿರಿಯರಾಗಿರುವವರು 84ರ ಹರೆಯದ ನಿವೃತ್ತ ಶಿಕ್ಷಕಿ ಮಾಲತಿ ಅವರು. ಈ ಎಲ್ಲ ನಿವೃತ್ತ ಶಿಕ್ಷಕರು-ಶಿಕ್ಷಕೇತರರು ತಮ್ಮ ಸೇವಾ ಬದ್ಧತೆಯಿಂದ ಕೆನರಾ ಶಿಕ್ಷಣ ಸಂಸ್ಥೆಗಳ ಉನ್ನತಿಗೆ ಕಾರಣರಾಗಿದ್ದಾರೆ ಎಂದು ಅವರು ನುಡಿದರು.

ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಈಗ ಕೆ.ಜಿ. ಯಿಂದ ಎಂಜಿನಿಯರಿಂಗ್ ವರೆಗೆ 11 ಶಿಕ್ಷಣ ಸಂಸ್ಥೆಗಳನ್ನು ಹೊಂದಿದೆ . 8592 ಮಂದಿ ವಿದ್ಯಾರ್ಥಿಗಳಿದ್ದಾರೆ. ಗುರುನಮನ ಕಾರ್ಯಕ್ರಮಕ್ಕೆ ವ್ಯಾಪಕ ಸಿದ್ಧತೆಗಳನ್ನು ಸ್ವಯಂಸೇವಕರು ನಡೆಸಿದ್ದಾರೆ. ಈ ಕಾರ್ಯಕ್ರಮವು ಶಿಕ್ಷಣ ಕ್ಷೇತ್ರದಲ್ಲಿ ವಿನೂತನ ಮುನ್ನುಡಿಯಾಗುವುದು ಎಂಬ ನಿರೀಕ್ಷೆ ಇದೆ. ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಕಲಿತಂತಹ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸುತ್ತೇವೆ ಎಂದರು.

ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಪಿಆರ್ ಒ ಉಜ್ವಲ್,  ಕೆನರಾ ಹಳೆ ವಿದ್ಯಾರ್ಥಿಗಳಾಗಿರುವ ಸುಧೀರ ಭಕ್ತ ಮತ್ತು ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು