2:17 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಮಂಗಳೂರು ಸಿಸಿಬಿ ಪೊಲೀಸರ ಭಾರೀ ಕಾರ್ಯಾಚರಣೆ: 23 ಕೆಜಿ ಗಾಂಜಾ ವಶ; ಓರ್ವ ಆರೋಪಿಯ ಸೆರೆ

29/05/2023, 20:26

ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.


ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೃಹತ್‌ ಪ್ರಮಾಣದಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. 23
ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 29ರಂದು ಮಂಗಳೂರು ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ ಕೆಯುವಿ 100 ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ. ಎ. ಹೆಗಡೆ ಅವರ ನೇತೃತ್ವದ ಸಿಸಿಬಿ ಪೊಲೀಸರು ಮುಡಿಪು ಕಾಯರಗೋಳಿ ಕ್ರಾಸ್ ಎಂಬಲ್ಲಿ ಪತ್ತೆ ಹಚ್ಚಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಮೊಯಿದ್ದೀನ್ ಶಬೀರ್ (35) ಎಂಬಾತನನ್ನು ಬಂಧಿಸಿದ್ದಾರೆ. ಈತ ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ಗ್ರಾಮದ ಬಂದ್ಯೋಡ್ ನ ಕುಬನೂರು ನಿವಾಸಿಯಾಗಿದ್ದಾನೆ. ಆರೋಪಿಯ ವಶದಲ್ಲಿದ್ದ ಮಹೀಂದ್ರ ಕೆಯುವಿ ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ 23.250 ಕೆಜಿ ಗಾಂಜಾವನ್ನು, ಮೊಬೈಲ್ ಫೋನ್ ಗಳು-2 ನಗದು ರೂ. 220/- ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಹೀಂದ್ರ ಕಾರು ಮತ್ತು ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 12,96,470/- ಆಗಿರುತ್ತದೆ. ಆರೋಪಿಯು ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದ. ಈ ಬಗ್ಗೆ ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಮೊಯಿದ್ದೀನ್’ ಶಬೀರ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಜಿಲ್ಲೆಯ ಕಾಸರಗೋಡು, ಮಂಜೇಶ್ವರ, ಕುಂಬ್ಳೆ, ವಿದ್ಯಾನಗರ ಪೊಲೀಸ್‌ ಠಾಣೆಗಳಲ್ಲಿ ಕಳ್ಳತನ, ಹಲ್ಲೆ, ಕೊಲೆ ಹೀಗೆ ಒಟ್ಟು 12 ಪ್ರಕರಣ ದಾಖಲಾಗಿರುತ್ತದೆ. ಅಲ್ಲದೇ ಆಂಧ್ರಪ್ರದೇಶದಲ್ಲಿ ಗಾಂಜಾ ಸಾಗಾಟಕ್ಕೆ ಸಂಬಂಧಿಸಿದಂತೆ ಪ್ರಕರಣವೊಂದು ದಾಖಲಾಗಿರುತ್ತದೆ.
ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್‌ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ ಪಿಎಸ್‌ಐ ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು