7:56 PM Friday3 - October 2025
ಬ್ರೇಕಿಂಗ್ ನ್ಯೂಸ್
Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ…

ಇತ್ತೀಚಿನ ಸುದ್ದಿ

Mangaluru | ರಾಜ್ಯ ಸರ್ಕಾರದ ಎಲ್ಲ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿಗಳೇ ಗಾಡ್ ಫಾದರ್: ಶಾಸಕ ವೇದವ್ಯಾಸ ಕಾಮತ್

26/06/2025, 13:08

ಮಂಗಳೂರು(reporterkarnataka.com): ಇಷ್ಟು ದಿನ ಒಳಗೊಳಗೆ ನಡೆಯುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರದ ಕಮಿಷನ್‌ ಅವ್ಯವಹಾರ ಇದೀಗ ಬಹಿರಂಗವಾಗಿಯೇ ನಡೆಯಲಾರಂಭಿಸಿದ್ದು ಸರ್ಕಾರದ ಹುಳುಕುಗಳೆಲ್ಲ ಬೀದಿಗೆ ಬಂದು ಜನಸಾಮಾನ್ಯರೂ ಸಹ ಹೇಸಿಗೆ ಪಟ್ಟುಕೊಳ್ಳುವಷ್ಟರ ಮಟ್ಟಿಗೆ ರಾಜ್ಯದ ಆಡಳಿತ ಹದಗೆಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದ ಸ್ವತಃ ಕಾಂಗ್ರೆಸ್ಸಿನ ಹಿರಿಯ ನಾಯಕರುಗಳೇ ಬೇಸತ್ತಿದ್ದು ಇದೀಗ ನೇರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ಆರಂಭಿಸಿದ್ದಾರೆ. ಬಡವರಿಗಾಗಿ ಇರುವ ಹೌಸಿಂಗ್ ಬೋರ್ಡ್‌ ಲಂಚಕೋರರ ಅಡ್ಡೆಯಾಗಿದ್ದು, ಕಮಿಷನ್‌ ಕೊಟ್ಟವರಿಗೆ ಮಾತ್ರ ಮನೆ ನೀಡಲಾಗಿದೆ ಎಂದು ಬಿ.ಆರ್ ಪಾಟೀಲ್ ರವರು ಆರೋಪಿಸಿದರೆ, ಕಂದಾಯ ಸಚಿವ ಕೃಷ್ಣ ಬೈರೇಗೌಡರು, “ಸರ್ಕಾರಿ ಕಚೇರಿಗಳಲ್ಲಿ ಯಾವ ಕೆಲಸಕ್ಕೆ ಎಷ್ಟು ಲಂಚ ಎಂಬುದನ್ನು ಬೋರ್ಡ್ ಹಾಕಿಕೊಂಡು ಬಿಡಿ” ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ. ನಾನೊಬ್ಬ ಆಡಳಿತ ಪಕ್ಷದ ಶಾಸಕನಾಗಿದ್ದುಕೊಂಡು ಒಂದು ಚರಂಡಿ, ರಸ್ತೆ ನಿರ್ಮಿಸಲು ಸಹ ಸಾಧ್ಯವಾಗುತ್ತಿಲ್ಲ ಎಂದು ಎನ್.‌ ವೈ. ಗೋಪಾಲಕೃಷ್ಣ ಆಕ್ರೋಶ ತೋರಿಸಿದರೆ, ರಾಜ್ಯದಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿದ್ದು, ಎರಡು ವರ್ಷದಿಂದ ಯಾವುದೇ ಅನುದಾನ ಸಿಗುತ್ತಿಲ್ಲ. ರಾಜೀನಾಮೆ ಕೊಟ್ಟು ಹೋಗುವ ಪರಿಸ್ಥಿತಿ ಇದೆ ಎಂದು ರಾಜು ಕಾಗೆಯವರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಈ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ತನಿಖೆ ನಡೆಯಲಿ, ಅದಕ್ಕೂ ಮೊದಲು ಜಮೀರ್ ಅಹ್ಮದ್ ರಾಜೀನಾಮೆ ಕೊಡಲಿ ಎಂದು ಬೇಳೂರು ಗೋಪಾಲ ಕೃಷ್ಣರವರು ತಮ್ಮದೇ ಸರ್ಕಾರವನ್ನು ಆಗ್ರಹಿಸಿದ್ದು ಇಡೀ ಸರ್ಕಾರದ ಬಂಡವಾಳವೇ ಬಯಲಾಗಿದೆ ಎಂದು ಶಾಸಕರು ಹೇಳಿದರು.
ಸ್ವತಃ ಮುಖ್ಯಮಂತ್ರಿಗಳೇ ಎಲ್ಲಾ ಅಕ್ರಮಗಳಿಗೆ ಗಾಡ್‌ ಫಾದರ್‌ ಆಗಿ ನಿಂತಿರುವಾಗ ಇನ್ನು ಭ್ರಷ್ಟರಿಗೆ ಯಾವ ಭಯ? ವಿಪಕ್ಷದವರಾದ ನಾವು ಹೇಳಿದರೆ ರಾಜಕೀಯ ಎನ್ನುವ ಕಾಂಗ್ರೆಸ್ಸಿಗರು ಈಗೇನು ಹೇಳುತ್ತಾರೆ? ಇನ್ನೂ ಸಹ ಯಾವ ಮುಖ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದಾರೆ? ಕಿಂಚಿತ್ತಾದರೂ ಮರ್ಯಾದೆ ಉಳಿದಿದ್ದರೆ ಕೂಡಲೇ ರಾಜ್ಯದ ಜನತೆಯ ಕ್ಷಮೆಯಾಚಿಸಿ ರಾಜೀನಾಮೆ ಕೊಟ್ಟು ತೊಲಗಲಿ ಎಂದು ಶಾಸಕ ಕಾಮತ್ ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು