2:49 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Mangaluru | ಕ್ರೈಸ್ತ ಧರ್ಮ ಗುರುಗಳ ದಿನಾಚರಣೆ: ಪಾಲ್ದನೆ ಚರ್ಚ್ ನಲ್ಲಿ ಮೂವರು ಧರ್ಮಗುರುಗಳಿಗೆ ಸನ್ಮಾನ

09/08/2026, 13:04

ಮಂಗಳೂರು(reporterkarnataka.com): ಕ್ಯಾಥೊಲಿಕರ ಚರ್ಚ್ ಧರ್ಮಗುರುಗಳ ಪೋಷಕ ಸಂತ ಜಾನ್ ಮೇರಿ ವಿಯಾನ್ನಿ ಅವರ ಸ್ಮರಣಾರ್ಥ ಆಗಸ್ಟ್ 4 ಅನ್ನು ಧರ್ಮಗುರುಗಳ ದಿನವಾಗಿ ಆಚರಿಸಲಾಗುತ್ತದೆ.
ಆ ಪ್ರಯುಕ್ತ ಆಗಸ್ಟ್ 9ರಂದು ಭಾನುವಾರ ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಬಲಿ ಪೂಜೆಯ ಸಂದರ್ಭ ಪ್ರಧಾನ ಧರ್ಮಗುರು ಸೇರಿದಂತೆ ಮೂವರು ಧರ್ಮಗುರುಗಳನ್ನು ಸನ್ಮಾನಿಸಲಾಯಿತು.
ಪ್ರಧಾನ ಧರ್ಮ ಗುರು ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರನ್ನು ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಸಹಾಯಕ ಧರ್ಮ ಗುರು ವಂದನೀಯ ಫಾ. ಜೋಸೆಫ್ ಕುವೆಲ್ಲೊ ಅವರನ್ನು ಚರ್ಚ್ ನ ಕಾರ್ಯದರ್ಶಿ ರೋಷನ್ ಮೊಂತೇರೊ, ಚರ್ಚ್ ನಲ್ಲಿ ಡಿಯಾಕೋನ್ ಆಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಧರ್ಮಗುರುಗಳಾಗಿ ದೀಕ್ಷೆ ಸ್ವೀಕರಿಸಿ ಇಂದು ಪಾಲ್ದನೆಗೆ ಅತಿಥಿಯಾಗಿ ಆಗಮಿಸಿ ಬಲಿ ಪೂಜೆಯಲ್ಲಿ ಸಹಭಾಗಿತ್ವ ವಹಿಸಿದ ವಂದನೀಯ ಫಾ. ರೋಶ್ವಿನ್ ಲೋಪೆಜ್ ಅವರನ್ನು ಚರ್ಚ್ ನ ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ ಅವರು ಹೂ ಗುಚ್ಛ ನೀಡಿ ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು