5:21 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ಕೆಲರಾಯ್ ಚರ್ಚ್ ನಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ

18/09/2025, 22:18

ಮಂಗಳೂರು(reporterkarnataka.com): ನಗರ ಕೆಲರಾಯ್ ಸೈಂಟ್ ಆನ್ಸ್ ಚರ್ಚ್ ಮತ್ತು ಕ್ಯಾಥೊಲಿಕ್ ಸಭಾ ಕೆಲರಾಯ್ ಘಟಕದ ಜಂಟಿ ಆಶ್ರಯದಲ್ಲಿ ಕ್ರೈಸ್ತ ಸಮುದಾಯದ ಜನೋತ್ಸವ (ಲಾಯಿಕೋತ್ಸವ್ – 2025) ಸಪ್ಟೆಂಬರ್ 21 ರಂದು ಕೆಲರಾಯ್ ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ.

ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜ ಮುಖಿ ಕಾರ್ಯಕ್ರಮಗಳನ್ನು ನಡೆಸಲು ಮುಂದಾಳುತ್ವ ವಹಿಸಲು ಆಸಕ್ತಿ ಇರುವ ಕ್ರೈಸ್ತ ಸಮುದಾಯದ ಮುಖಂಡರಿಗೆ, ಯುವ ಜನರಿಗೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿ ಇರುವವರಿಗೆ ತರಬೇತಿ, ಮಾಹಿತಿ ನೀಡುವುದು, ಸಮಾಲೋಚನೆ ನಡೆಸುವುದು ಮತ್ತು ಏಕತೆಯ ಬಗ್ಗೆ ಮಾಹಿತಿ ನೀಡುವುದು ಇದರ ಉದ್ದೇಶವಾಗಿದೆ.
ಬೆಳಗ್ಗೆ 8.30ರಿಂದ ಮಧ್ಯಾಹ್ನ 1 ಗಂಟೆ ತನಕ ನಡೆಯುವ ಈ ಕಾರ್ಯಕ್ರಮದಲ್ಲಿ ನೀರುಮಾರ್ಗ, ಬೊಂಡಂತಿಲ, ಉಳಾಯಿಬೆಟ್ಟು, ಮಲ್ಲೂರು, ಅಡ್ಯಾರ್, ಅರ್ಕುಳ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿ ಹಾಗೂ ಮಂಗಳೂರು ಮಹಾ ನಗರ ಪಾಲಿಕೆಯ ಪದವು, ವಾಮಂಜೂರು ವಾರ್ಡ್ ಗಳ ವ್ಯಾಪ್ತಿಗೆ ಬರುವ 5 ಚರ್ಚು ಗಳ (ಕೆಲರಾಯ್, ನೀರುಮಾರ್ಗ, ಪೆರ್ಮಾಯ್, ಪಾಲ್ದನೆ, ವಾಮಂಜೂರು) ಕ್ರೈಸ್ತ ಸಮುದಾಯದ ಚರ್ಚ್ ಪಾಲನಾ ಸಮಿತಿಯ ಸದಸ್ಯರು, ಕ್ಯಾಥೊಲಿಕ್ ಸಭಾ ಘಟಕಗಳ ಸದಸ್ಯರು, ಐ. ಸಿ. ವೈ. ಎಂ. ಸದಸ್ಯರು, ವಿವಿಧ ಮುಖಂಡರು ಹಾಗೂ ಆಸಕ್ತರು ಸೇರಿದಂತೆ ಸುಮಾರು 700 ಕ್ಕಿಂತ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಕೆಲರಾಯ್ ಚರ್ಚ್ ಧರ್ಮಗುರು ವಂದನೀಯ ಫಾ. ಸಿಲ್ವೆಸ್ಟರ್ ಡಿ’ ಕೋಸ್ಟಾ ಮತ್ತು ಕ್ಯಾಥೋಲಿಕ್ ಸಭಾ ಅಧ್ಯಕ್ಷ ಡೊಟ್ಟಿ ಬ್ರಾಗ್ಸ್ ಅವರು ತಿಳಿಸಿದ್ದಾರೆ. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ವಂದನೀಯ ಫಾ. ಫೌಸ್ಟಿನ್ ಲೋಬೊ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು