1:30 AM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮಂಗಳೂರು: ಕೋಕೆನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 4 ಲಕ್ಷ ರೂ. ಮೌಲ್ಯದ ಸೊತ್ತು ವಶ

18/03/2024, 21:15

ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಕೋಕೆನ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಳ್ಳಾಲದ ಆಂಬ್ಲಮೊಗರು ಸಮೀಪ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಂಬ್ಲ ಮೊಗರು ಕೊಳಂಜೆ ಹಿಟ್ಟು ಮನೆ ನಿವಾಸಿ ಸದಕತ್ ಯು. ಅಲಿಯಾಸ್ ಶಾನ್ ನವಾಜ್(31) ಹಾಗೂ ಅಂಬ್ಲ ಮೊಗರು ಸೇನರಬೆಟ್ಟು ಮನೆ ನಿವಾಸಿ ಮಹಮ್ಮದ್ ಅಶ್ಫಕ್ ಅಲಿಯಾಸ್ ಅಶ್ಫಾ(25) ಎಂದು ಗುರುತಿಸಲಾಗಿದೆ.
ಗೋವಾದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ ಆರೋಪಿಗಳಿಂದ 35 ಗ್ರಾಂ ಕೋಕೆನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್. ಎಂ. ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಕೋಕೆನ್ ನ್ನು ಮಾರಾಟ/ಸಾಗಾಟ ಮಾಡುತ್ತಿದ್ದಾಗ ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ ಹೊಂಡಾ ಅಕ್ಟಿವಾ ಸ್ಕೂಟರ್ , ಅದರಲ್ಲಿ ಸಾಗಾಟ ಮಾಡುತ್ತಿದ್ದ 2,72,000/- ರೂ ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೋಕೆನ್, 3 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು ರೂ. 5560/-ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000/- ಆಗಿರುತ್ತದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳಿಬ್ಬರೂ ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಗೋವಾ ರಾಜ್ಯದಿಂದ ಕೋಕೆನ್ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಗಳ ಪೈಕಿ ಸದಕತ್
ಯು. ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು