7:13 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್: ಕಡಲನಗರಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್

06/06/2023, 17:57

ಮಂಗಳೂರು(reporterkarnataka.com): ಪೊಲೀಸ್ ಇಲಾಖೆ ನೈತಿಕ ಪೊಲೀಸ್ ಗಿರಿ ನಡೆಯಲು ಯಾವುದೇ ಕಾರಣಕ್ಕೂ ಅವಕಾಶವೇ ನೀಡಬಾರದು. ಈ ನಿಟ್ಟಿನಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಕೋಮು ಸಾಮರಸ್ಯ ತರಲು ಸೂಚನೆ ನೀಡಿದ್ದೇನೆ. ನೈತಿಕ ಪೊಲೀಸ್ ಗಿರಿ ನಡೆದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲು ಸೂಚನೆ ಕೊಟ್ಟಿದ್ದೇನೆ ಎಂದರು.
ಕರಾವಳಿ ಮಾತ್ರವಲ್ಲ ಕೋಮು ವೈಷಮ್ಯ ಇರುವ ಕಡೆಗಳಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಅದರ ರೂಪುರೇಷೆ ಬಗ್ಗೆ ಕಮಿಷನರ್ ತಯಾರಿಸುತ್ತಾರೆ. ಇದರ ಮುಖ್ಯ ಉದ್ದೇಶ ನೈತಿಕ ಪೊಲೀಸ್‌ಗಿರಿ ಹತ್ತಿಕ್ಕುವುದು. ಮೊದಲಿಗೆ ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಇಲ್ಲಿ ಯಶಸ್ವಿಯಾದರೆ ಇಡೀ ರಾಜ್ಯದಲ್ಲಿ ವಿಸ್ತರಣೆ ಮಾಡುತ್ತೇವೆ ಎಂದು ಅವರು ನುಡಿದರು.
ಬಿಜೆಪಿ ಆಡಳಿತದಲ್ಲಿ ಮತೀಯ ಕೊಲೆಗಳು ನಡೆದಾಗ ಪರಿಹಾರ ನೀಡುವಲ್ಲಿ ತಾರತಮ್ಯವಾಗಿದೆ. ಈ ತಾರತಮ್ಯವನ್ನು ಸರಿಪಡಿಸಲು ನಿರ್ಧರಿಸಲಾಗಿದೆ.‌ ಹತ್ಯೆಗೀಡಾದ ಫಾಝಿಲ್, ಮಸೂದ್ ಮತ್ತು ಜಲೀಲ್ ಕುಟುಂಬಗಳಿಗೆ ಪರಿಹಾರ ಕೊಡುವ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು.
ಯುವ ಸಮೂಹದಲ್ಲಿ ಡ್ರಗ್ಸ್ ಗೆ ಬಲಿಯಾಗಿದೆ. ಡ್ರಗ್ಸ್ ದಂಧೆ ತಡೆಯೋಕೆ ಆಗದ ರೀತಿಯಲ್ಲಿ ಬೆಳೆಯುತ್ತಿದೆ. ಆಗಸ್ಟ್ 15ರೊಳಗೆ ಕರಾವಳಿಯಲ್ಲಿ ಯಾವುದೇ ಡ್ರಗ್ಸ್ ಸಿಗದಂತೆ ಕ್ರಮ ತೆಗೆದುಕೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು.
ಸರ್ವ ಜನಾಂಗದ ಶಾಂತಿಯ ತೋಟ ಎಂದು ಪ್ರಣಾಳಿಕೆ ಭರವಸೆ ಕೊಟ್ಟಿದ್ದೇವೆ. ಶಾಂತಿಯ ತೋಟಕ್ಕೆ ತೊಂದರೆ ಮಾಡುವ ಕೆಲಸ ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ನಡೀತಿದೆ. ನಮಗೆ ಕೋಮು ಸಾಮರಸ್ಯ ಇರಬೇಕು. ಯಾರು ಪ್ರಚೋದನೆ ಮಾಡುತ್ತಾರೋ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಮ್ಮ ಬಳಿ ಕಾನೂನುಗಳಿವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು