12:22 AM Wednesday7 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರು ಕಮಿಷನರೇಟ್: ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ; 3 ತಿಂಗಳ ಅವಧಿಯಲ್ಲಿ 29 ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತು

02/04/2023, 12:29

ಮಂಗಳೂರು(reporter Karnataka.com); ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ ಸಂಬಂಧಿಸಿದಂತೆ ಕಳೆದ 3 ತಿಂಗಳ ಅವಧಿಯಲ್ಲಿ 29 ಮಂದಿಯ ಡ್ರೈವಿಂಗ್ ಲೈನ್ಸೆನ್ಸ್ ಅಮಾನತು ಮಾಡಲಾಗಿದೆ.
ಕಮಿಷನರೇಟ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಟ್ರಾಫಿಕ್ ಪೊಲೀಸರು ಕಾರ್ಯಾಚರಣೆ ನಡೆಸಿ 29 ಮಂದಿಯ ಚಾಲನಾ ಪರವಾನಿಗೆಯನ್ನು ಅಮಾನತಿನಲ್ಲಿಟ್ಟಿದ್ದಾರೆ. 6 ತಿಂಗಳ ಅವಧಿವರೆಗೆ ಡ್ರೈವಿಂಗ್ ಲೈಸೆನ್ಸ್ ಅಮಾನತಿನಲ್ಲಿರುತ್ತದೆ. ಜನವರಿ 1, 2023ರಿಂದ ಮಾರ್ಚ್ 31, 2023ರ ಅವಧಿಯಲ್ಲಿ ನಡೆಸಿದ ಕಾರ್ಯಾಚರಣೆ ಆಗಿದೆ. ಹಾಗೆ ಈ ಅವಧಿಯಲ್ಲಿ ವಾಹನ ತಪಾಸಣೆ ಸಂಬಂಧಿಸಿದಂತೆ 23 ಪ್ರಕರಣ, ಇ ಚಾಲನ್ ಕೇಸ್ 28 ದಾಖಲಾಗಿದೆ. ಒಟ್ಟು 3 ತಿಂಗಳ ಅವಧಿಯಲ್ಲಿ 10200 ರೂ. ದಂಡ ವಸೂಲಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು