11:56 PM Thursday11 - September 2025
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ…

ಇತ್ತೀಚಿನ ಸುದ್ದಿ

Mangaluru | ರಾಷ್ಟ್ರೀಯ ಹೆದ್ದಾರಿ 66 ದುರಸ್ತಿ ಆಗ್ರಹಿಸಿ 12ರಂದು ಕಾಂಗ್ರೆಸ್ ಪ್ರತಿಭಟನೆ

11/09/2025, 23:56

ಮಂಗಳೂರು(reporterkarnataka.com): ರಸ್ತೆ ಗುಂಡಿಗಳಿಂದಾಗಿ ಹಲವರ ಸಾವಿಗೆ ಕಾರಣವಾಗಿರುವ ರಾಷ್ಟ್ರೀಯ ಹೆದ್ದಾರಿ 66ನ್ನು ದುರಸ್ತಿ ಮಾಡದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಧೋರಣೆಯನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೆ.12ರಂದು ಬೆಳಗ್ಗೆ ನಗರದ ನಂತೂರುನಲ್ಲಿ ಪ್ರತಿಭಟನೆ ನಡೆಸಲಿದೆ.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್
ಅವರು ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು.
ಪ್ರತಿಭಟನೆಯ ಬಳಿಕ ರಸ್ತೆ ದುರಸ್ತಿಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಎರಡು ದಿನಗಳ ಹಿಂದೆ ದ್ವಿಚಕ್ರ ವಾಹನ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗೆ ಬಿದ್ದು ಮಾಧವಿ ಎಂಬವರು ಮೃತಪಟ್ಟಿದ್ದಾರೆ. ಆದರೆ ಅವರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಧ್ವನಿಯೆತ್ತಿಲ್ಲ ಏಕೆ?. ಹಿಂದೂ ಮಹಿಳೆ ಅಪಘಾತದಲ್ಲಿ ಮೃತಪಟ್ಟಿದ್ದರೂ ಆಕೆಗೆ ನ್ಯಾಯ ದೊರಕಿಸಲು ಬಿಜೆಪಿಯ ರಾಜ್ಯ ಪ್ರತಿಪಕ್ಷ ನಾಯಕ ಆರ್. ಅಶೋಕ್ , ರಾಜ್ಯಾಧ್ಯಕ್ಷ ವಿಜಯೇಂದ್ರ, ಪಕ್ಷದ ನಾಯಕರಾದ ಸಿ.ಟಿ.ರವಿ, ನಾರಾಯಣ ಸ್ವಾಮಿ ಯಾಕೆ ಬಂದಿಲ್ಲ ಎಂದವರು ಪ್ರಶ್ನಿಸಿದರು.
ದ.ಕ. ಜಿಲ್ಲೆಯಲ್ಲಿ ಸರಣಿಯ ಹತ್ಯೆಗಳು ನಡೆದ ಬಳಿಕ ಪೊಲೀಸ್ ಅಧಿಕಾರಿಗಳು ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದ ಕಾರಣದಿಂದಾಗಿ ಶಾಂತಿ ನೆಲೆಸಿದೆ. ಇದೀಗ ಆತಂಕ ದೂರವಾಗಿ ಜನರಿಗೆ ಶಾಂತಿ, ನೆಮ್ಮದಿಯ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ. ಹೊಡಿ, ಬಡಿ, ಕಡಿ, ಕೋಮು ದ್ವೇಷದ ಭಾಷಣಕ್ಕೆ ಮಂಗಳೂರು ಪೊಲೀಸ್ ಆಯುಕ್ತರು ಮತ್ತು ದ.ಕ. ಜಿಲ್ಲಾ ಎಸ್ಪಿ ಕಡಿವಾಣ ಹಾಕಿದ್ದಾರೆ. ಕಾನೂನಿನ ಅನುಷ್ಠಾನ ಸಮರ್ಪಕವಾಗಿ ಆಗಿರುವ ಹಿನ್ನೆಲೆಯಲ್ಲಿ ಡ್ರಗ್ಸ್ ಪೂರೈಕೆ , ಮಟ್ಕಾ, ಸ್ಕಿಲ್ ಗೇಮ್, ಜುಗಾರಿ, ಇಸ್ಪೇಟ್ ಮತ್ತಿತರರ ಅಕ್ರಮ, ಕಾನೂನುಬಾಹಿರ ಚಟುವಟಿಕೆಗಳು ಬಂದ್ ಆಗಿವೆ ಎಂದು ಹರೀಶ್ ಕುಮಾರ್ ನುಡಿದರು.
ಕಾನೂನು ಎಲ್ಲರಿಗೂ ಒಂದೇ. ಆದರೆ ಅನುಷ್ಠಾನದಲ್ಲಿ ಅಧಿಕಾರಿಗಳು ಎಡವಿದ ಹಿನ್ನೆಲೆಯಲ್ಲಿ ಹಿಂದೆ ಸಮಸ್ಯೆ ಆಗಿತ್ತು. ಈಗ ಎಲ್ಲಡೆ ಗಣೇಶೋತ್ಸವ ಶಾಂತಿಯುತವಾಗಿ ನಡೆದಿದೆ. ಕಾರ್ಯಕ್ರಮಗಳಿಗೆ ಅನುಮತಿ ಪಡೆಯದವರಿಗೆ ಸ್ವಲ್ಪ ತೊಂದರೆ ಆಗಿದ್ದು ನಿಜ. ಡಿಜೆಗೆ ಅವಕಾಶ ನೀಡದಿರುವುದು ಸ್ವಾಗತಾರ್ಹ. ಆರೋಗ್ಯಕ್ಕೆ ಹಾನಿಕಾರವಾದ ಡಿಜೆಗೆ ಇನ್ನು ಮುಂದೆಯೂ ಪೊಲೀಸ್ ಇಲಾಖೆ ಅವಕಾಶ ನೀಡಬಾರದು. ಧ್ವನಿವರ್ಧಕ, ಶಾಮಿಯಾನ, ಲೈಟಿಂಗ್ಸ್ ನವರಿಗೆ ತೊಂದರೆ ಆಗಿಲ್ಲ . ಸರಕಾರ ಕಾನೂನು ಮಾಡಿರುವುದನ್ನು ಅಧಿಕಾರಿಗಳು ಅನುಷ್ಠಾನ ಮಾಡಿದ್ದಾರೆ. ಏನಾದರೂ ಸಣ್ಣಪುಟ್ಟ ಲೋಪದೋಷಗಳು ಕಾಣಿಸಿಕೊಂಡಿದ್ದರೆ ಅವುಗಳನ್ನು ಸಂಬಂಧಪಟ್ಟವರನ್ನು ಕರೆಸಿ ಸಭೆ ನಡೆಸಿ ಸರಿಪಡಿಸುವ ಬಗ್ಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ , ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಸ್. ಅಪ್ಪಿ, ಮುಖಂಡರಾದ ಶಬೀರ್ ಸಿದ್ದಕಟ್ಟೆ, ಸುರೇಂದ್ರ ಕಂಬಳಿ, ವಿಕಾಶ್ ಶೆಟ್ಟಿ, ನೀರಜ್‌ಚಂದ್ರ ಪಾಲ್, ಪದ್ಮಪ್ರಸಾದ್ ಜೈನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು