2:49 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ ಭಂಡಾರಿಗೆ ಭಾರೀ ಸ್ವಾಗತ

26/03/2024, 21:35

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಆಗಮಿಸಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರೀ ಸ್ವಾಗತ ಕೋರಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ, ಕಾಂಗ್ರೆಸ್ ಗ್ಯಾರಂಟಿ ಫಲಾನುಭಾವಿಗಳು ಕೈ ಹಿಡಿಯುತ್ತಾರೆ. ಪಕ್ಷದ ವರಿಷ್ಠರು ಹೊಸ ಮುಖ ಹಾಗೂ ಕ್ರೀಯಾಶೀಲ ಅಭ್ಯರ್ಥಿಗೆ ಅವಕಾಶ ನೀಡಿದ್ದಾರೆ. ಒಮ್ಮತದ ನಾಯಕನಾಗಿರುವ ಪದ್ಮರಾಜ್ ಆರ್. ಗೆದ್ದೇ ಗೆಲ್ಲುತ್ತಾರೆ. ಉಡುಪಿ -ಚಿಕ್ಕಮಗಳೂರಿನಲ್ಲಿಯೂ ಜನಪ್ರತಿನಿಧಿಯಾಗಿ ಒಳ್ಳೆಯ ಹೆಸರು ಸಂಪಾದಿಸಿದ ಜಯ ಪ್ರಕಾಶ ಹೆಗ್ಡೆ ಅಭ್ಯರ್ಥಿಯಾಗಿರೋದರಿಂದ ಆ ನಿಟ್ಟಿನಲ್ಲಿ ಕೂಡಾ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಖಂಡಿತ ಜಯಭೇರಿ ಹಾಗೂ ಗೆಲ್ಲಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಪಾಲಿಕೆ ವಿರೋಧ ಪಕ್ಷ ನಾಯಕ ಪ್ರವೀಣ್ ಚಂದ್ರ ಆಳ್ವ, ಕಾರ್ಪೋರೇಟರ್ ಎ. ಸಿ. ವಿನಯ್ ರಾಜ್ ಹಾಗೂ ಮತ್ತಿರರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು