2:22 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು: ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 30 ಅಂಗಡಿಗಳ ಪರವಾನಿಗೆ ರದ್ದು; 68,350 ರೂ. ದಂಡ

08/06/2021, 19:27

ಮಂಗಳೂರು(reporterkarnataka news): ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನೀಡಿದ ಮಾರ್ಗಸೂಚಿಯನ್ನು ಉಲ್ಲಂಘಿಸಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ 78 ಅಂಗಡಿಗಳಿಗೆ 68,350 ರೂ. ದಂಡ ವಿಧಿಸಲಾಗಿದ್ದು, ಇದರ ಪೈಕಿ 30 ಅಂಗಡಿಗಳ ಉದ್ದಿಮೆ ಪರವಾನಿಗೆ ರದ್ದು ಮಾಡಲಾಗಿದೆ.


ಜಿಲ್ಲಾಡಳಿತದ ಮಾರ್ಗಸೂಚಿಗಳನ್ವಯ ಬೆಳ್ಳಗೆ 6 ರಿಂದ 10 ಗಂಟೆಯವೆರೆಗೆ ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಆದರೆ ಕೆಲವು ಸಂದರ್ಭಗಳಲ್ಲಿ ಅನುಮತಿಸದೆ ಇರುವ ವಸ್ತುಗಳ ಅಂಗಡಿಗಳನ್ನು ಅನಧಿಕೃತವಾಗಿ ತೆರೆದು ವ್ಯಾಪಾರ ವಹಿವಾಟುಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಈ ಹಿನ್ನಲೆಯಲ್ಲಿ ಮಂಗಳವಾರ ಪಾಲಿಕೆಯ ವಿವಿಧ ತಂಡಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೋವಿಡ್ 19 ಮಾರ್ಗಸೂಚಿ ಉಲ್ಲಂಘಿಸಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಈ 78  ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಬೆಳಗ್ಗೆ 10 ಗಂಟೆಯ ಅವಧಿ ಮೀರಿ ಕೋವಿಡ್ 19 ಮಾರ್ಗಸೂಚಿಯನ್ನು ಉಲ್ಲಂಘಿಸಿ ಸಾರ್ವಜನಿಕರು ಅನಗತ್ಯ ಸಂಚರಿಸುತ್ತಿರುವವರನ್ನು ತಪಾಸಣೆ ನಡೆಸಿದಾಗ ಅನಗತ್ಯ ಓಡಾಟ ಮಾಡಿದ 19 ಪ್ರಕರಣಗಳಿಗೆ 8050 ರೂ. ದಂಡವನ್ನು ವಿಧಿಸಿ ಎಚ್ಚರಿಕೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು