5:17 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಂಗಳೂರು | ಗೋ ಕಳ್ಳತನ ಪ್ರಕರಣ: 3 ಮಂದಿ ಆರೋಪಿಗಳ ಬಂಧನ; ಜರ್ಸಿ ದನ ವಶಕ್ಕೆ

17/09/2025, 20:27

ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ತಜಿಪೋಡಿ ಎಂಬಲ್ಲಿ ಗೋ ಕಳ್ಳತನ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಆರೋಪಿಗಳ ಬಂಧಿಸಿದ್ದಾರೆ.
ಬಂಧಿತರನ್ನು ಅಡ್ಯಾರ್ ಗಾಣದಬೆಟ್ಟು ನಿವಾಸಿ
ಶಾಬಾಜ್ ಅಹಮ್ಮದ್, ಅರ್ಕುಳದ ಮೊಹಮ್ಮದ್ ಸುಹಾನ್ ಹಾಗೂ ಅಡ್ಯಾರ್ ಜುಮ್ಮಾ ಮಸೀದಿ ಬಳಿ ಮನೆಯ ವಳಚ್ಚಿಲ್ ಖಾದರ್ ಮೊಹಮ್ಮದ್ @ ಕೋಳಿ ಮೋನಕ್ಕ ಎಂದು ಗುರುತಿಸಲಾಗಿದೆ.
ಆರೋಪಿಗಳು ಸೆ. 13ರಂದು ಬೆಳಗಿನ ಜಾವ ಮಂಗಳೂರು ನಗರದ ಹೊರವಲಯದ ಅಡ್ಯಾರ್ ತಜಿಪೋಡಿ ಮನೆ ಎಂಬಲ್ಲಿ ಉಮೇಶ್ ಆಳ್ವ ಎಂಬವರ ಮನೆಯ ಅಂಗಳದಿಂದ ಒಂದು ಕ್ರಾಸ್ ಜರ್ಸಿ ಹಸುವನ್ನು ಕಳ್ಳತನ ಮಾಡಿದ್ದರು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಕಳುವಾದ ಹಸುವನ್ನು ಕಂಕನಾಡಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಜೀವಂತವಾಗಿ ಪತ್ತೆ ಮಾಡಿ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಆರೋಪಿಗಳು ದನ ಕಳ್ಳತನ ಮಾಡಿ ಅದನ್ನು ವಳಚಿಲ್ ಅಬ್ದುಲ್ ಖಾದರ್ ಮನೆಗೆ ಹೊಂದಿಕೊಂಡ ಶೆಡ್ ನಲ್ಲಿ ಹತ್ಯೆ ಮಾಡಿ ಮಾಂಸ ಮಾಡಲು ಸಿದ್ಧತೆ ಮಾಡಿಕೊಂಡ ಹಿನ್ನಲೆಯಲ್ಲಿ ಈ ಜಾಗವನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಆದ್ಯಾದೇಶ -2020 ರಲ್ಲಿ ಪ್ರದತ್ತವಾದ ಅಧಿಕಾರದಂತೆ ಜಪ್ತಿ ಮಾಡಿ, ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು