ಇತ್ತೀಚಿನ ಸುದ್ದಿ
ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪೃಥ್ವಿರಾಜ್ ಎಂ. ಪೂಜಾರಿ ಆಯ್ಕೆ
09/02/2025, 14:12

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಪೃಥ್ವಿರಾಜ್ ಎಂ. ಪೂಜಾರಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, 539 ಮತಗಳನ್ನು ಗಳಿಸಿ ಪೃಥ್ವಿರಾಜ್ ಎಂ ಪೂಜಾರಿ ಅಧ್ಯಕ್ಷ ಸ್ಥಾನಕ್ಕೆ ಚುನಾಯಿತರಾಗಿದ್ದಾರೆ.
ಮಂಗಳೂರು ತಾಲೂಕಿನ ಕಂಕನಾಡಿ 49ನೇ ವಾರ್ಡಿನ ನಿವಾಸಿಯಾಗಿರುವ ಪೃಥ್ವಿರಾಜ್ ಅವರು ಈ ಹಿಂದೆ ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಬೂತ್ ಅಧ್ಯಕ್ಷರಾಗಿ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ.) ಕಂಕನಾಡಿ ಘಟಕದ ಮಾಜಿ ಅಧ್ಯಕ್ಷರು. ಸೂರ್ಯಕಾಂತಿ ಬಿಸಿನೆಸ್ ನೆಟ್ವರ್ಕ್ ಇದರ ಜೊತೆ ಕಾರ್ಯದರ್ಶಿಯಾಗಿ, ರೋಟರಿ ಕ್ಲಬ್ ಆಫ್ ಮಂಗಳೂರು ಸೀ ಸೈಡ್ ಇದರ ಸದಸ್ಯರಾಗಿದ್ದಾರೆ. 2024ರ ಆಗಸ್ಟ್ ರಿಂದ 2024 ಸಪ್ಟೆಂಬರ್ ರವರೆಗೆ ಮತದಾನ ನಡೆದಿತ್ತು. ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದರು.
ಎಂದು ಪ್ರಕಟಣೆ ತಿಳಿಸಿದೆ.