10:06 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ: ಕೈ ಪಾಳದಲ್ಲಿ ಕ್ಷಿಪ್ರ ಬೆಳವಣಿಗೆ?; ಮಾಜಿ ಮೇಯರ್ ಕವಿತಾ ಸನಿಲ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?

08/04/2023, 22:00

ಮಂಗಳೂರು(reporterkarnataka.com): ಮೇಯರ್ ಆಗಿದ್ದಾಗ ಮಸಾಜ್ ಸೆಂಟರ್, ಸ್ಕಿಲ್ ಗೇಮ್ ಗಳ ಮೇಲೆ ಸದಾ ದಾಳಿ ನಡೆಸುವ ಮೂಲಕ ಮಂಗಳೂರಿನ ಜನ ಮಾನಸದಲ್ಲಿ ಭದ್ರವಾಗಿ ನೆಲೆಯೂರಿದ್ದ ಕವಿತಾ ಸನಿಲ್ ಅವರು ದೀರ್ಘಕಾಲದ ಬಳಿಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಂಗಳೂರು ದಕ್ಷಿಣ ಕ್ಚೇತ್ರದಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದ ಕವಿತಾ ಸನಿಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಲು ಸಜ್ಜಾಗಿದ್ದಾರೆ. ಕಾಂಗ್ರೆಸ್ ನಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.
ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದ ಪ್ರಥಮ ಮಹಿಳೆ ಎಂದು ಹೆಗ್ಗಳಿಕೆಯ ಪಾತ್ರವಾಗಿದ್ದ ಕವಿತಾ ಸನಿಲ್ ಮಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಮಂಗಳೂರು ದಕ್ಷಿಣ ದಲ್ಲಿ ಸುಮಾರು 60 ಸಾವಿರ ಮತದಾರರನ್ನು ಹೊಂದಿರುವ ಬಿಲ್ಲವ ಸಮುದಾಯಕ್ಕೆ ಸೇರಿದವರು. ಬಿಲ್ಲವ ಸಮುದಾಯ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂಬ ಹಕ್ಕೊತ್ತಾಯ ಈಗಾಗಲೇ ಸಮುದಾಯದಿಂದ ವ್ಯಕ್ತವಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಕ್ರಿಶ್ಚನ್ ಸಮುದಾಯಕ್ಕೆ ಸೇರಿದ ಜೆ. ಆರ್. ಲೋಬೋ ಅವರಿಗೆ ಟಿಕೆಟ್ ಅಂತಿಮಗೊಳಿಸಲಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿರುವುದು ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡೇ ಕವಿತಾ ಸನಿಲ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕವಿತಾ ಸನಿಲ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಮಂಗಳೂರು ದಕ್ಷಿಣದಲ್ಲೂ ಬಂಡಾಯದ ಬಿಸಿ ಕಾಂಗ್ರೆಸ್ ಗೆ ತಟ್ಟಿದಂತಾಗುತ್ತದೆ. ಮೊದಲೇ ಕರಾವಳಿ ಭಾಗದಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು