11:57 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

Mangaluru | ದ.ಕ. ಜಿಲ್ಲೆ: ಜೂ.1ರಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ; 61 ದಿನಗಳ ಕಾಲ ಫಿಶಿಂಗ್ ಸ್ತಬ್ದ

23/05/2025, 10:42

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳು ನಿಷೇಧಿಸಲಾಗಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.
ಮೀನುಗಾರಿಕೆ ನಿಷೇಧಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು