10:18 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮಹೋತ್ಸವ: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 15ರಂದು ನವದುರ್ಗೆ, ಶಾರದೆ ಪ್ರತಿಷ್ಢಾಪನೆ

07/10/2023, 15:20

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನ ಪ್ರತಿಷ್ಠಿತ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 34 ನೇ ವರ್ಷದ ನವರಾತ್ರಿ ಮಹೋತ್ಸವ ಇದೇ 15ರಂದು ಗಣೇಶ, ನವದುರ್ಗೆ ಮತ್ತು ಶಾರದಾ ಮಾತೆಯ ಮೂರ್ತಿಯ ಪ್ರತಿಷ್ಠಾಪನೆಗೊಳಿಸುವ ಮೂಲಕ ಪ್ರಾರಂಭವಾಗಲಿದೆ.

ದಸರಾ ಮಹೋತ್ಸವಕ್ಕೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಈ ಬಾರಿ ಕೂಡ ಮಂಗಳೂರು ದಸರಾ ಕ್ಷೇತ್ರದ ರೂವಾರಿ ಬಿ. ಜನಾರ್ಧನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ ಎಂದು ದೇವಳದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು ಮಾತನಾಡಿ, ದಸರಾ ಮಹೋತ್ಸವವು ಅ.25 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಅ. 24ರಂದು 4 ಗಂಟೆಗೆ ಮಂಗಳೂರು ದಸರಾ ಮೆರವಣಿಗೆ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜ ರಸ್ತೆಯಲ್ಲಿ ಸಾಗಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ. ಅ.15 ರಿಂದ ಅ. 23ರವರಿಗೆ ಪ್ರತಿದಿನ ಸಂಜೆ 6ರಿಂದ ರಾತ್ರಿ 9 ಗಂಟೆಯವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಮಂಗಳೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವು ಕಡೆಗಳಿಂದ ಬರುವ ಭಾರತೀಯ ಸನಾತನ ಧರ್ಮದ, ಇತಿಹಾಸ ಭಾವದ ನೆನಪುಗಳನ್ನು ಸ್ಮರಿಸುವ ವಿಶೇಷ ಸ್ತಬ್ದಚಿತ್ರಗಳು ಭಾಗವಹಿಸಲಿದ್ದು, ಈ ಸುಂದರ ಮೆರವಣಿಗೆ ವಿಶೇಷ ಮೆರುಗು ನೀಡಲಿದೆ. ಸಾಂಸ್ಕೃತಿಕ ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿರುವ ಎಲ್ಲಾ ಕಟ್ಟಡದ ಮಾಲೀಕರು ತಮ್ಮ ಕಟ್ಟಡಗಳನ್ನು ವಿದ್ದುದ್ದೀಪದಿಂದ ಅಲಂಕರಿಸಿ “ಮಂಗಳೂರು ದಸರಾ” ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಹರಿಕೃಷ್ಣ ಬಂಟ್ವಾಳ್, ಸಮಿತಿ ಸದಸ್ಯರಾದ ಕೆ. ಮಹೇಶ್ಚಂದ್ರ, ರವಿಶಂಕರ್ ಮಿಜಾರ್, ಎಂ. ಶೇಖರ್ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವೇಂದ್ರ ಪೂಜಾರಿ, ಡಾ.ಅನುಸೂಯ ಬಿ.ಟಿ. ಸಾಲಿಯಾನ್, ಕಿಶೋರ್ ಯೆಯ್ಯಾಡಿ, ಚಂದನ್, ಡಾ. ಬಿ.ಜಿ. ಸುವರ್ಣ, ವಾಸುದೇವ ಕೋಟ್ಯಾನ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು