5:16 PM Sunday20 - July 2025
ಬ್ರೇಕಿಂಗ್ ನ್ಯೂಸ್
SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮಹೋತ್ಸವ; ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ: ಶಾಸಕ ವೇದವ್ಯಾಸ್ ಕಾಮತ್ 

20/09/2022, 21:01

ಮಂಗಳೂರು(reporterkarnataka.com):ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. 

ಮಂಗಳೂರು ದಸರಾ‌ ಖ್ಯಾತಿ ದೇಶದೆಲ್ಲೆಡೆ ಹಬ್ಬುತ್ತಿದೆ. ಕರಾವಳಿ ಭಾಗದಲ್ಲಿ ಮಂಗಳೂರು ದಸರಾ ಹೊಸ ಹುರುಪು ನೀಡಿದ್ದು ಇದಕ್ಕೆ ಪೂರಕವಾಗಿ ಪಾಲಿಕೆಯ ವತಿಯಿಂದ ನಗರದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಮಂಗಳಾದೇವಿ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಸೇರಿದಂತೆ ನಗರದಲ್ಲಿ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಂಗಳೂರು ದಸರಕ್ಕೆ ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲಿ ಮನ್ನಣೆ ದೊರೆಯುತಿದ್ದು ಮುಂಬರುವ ದಿನಗಳಲ್ಲಿ ದೇಶ ವಿದೇಶದಿಂದ ಭಕ್ತರನ್ನು ಆಕರ್ಷಿಸುತ್ತದೆ ಎಂದು ಹೇಳಿದ್ದಾರೆ. 

ಮಂಗಳೂರು ದಸರಾ ಮೂಲಕ ಈ ಭಾಗದ ಆರ್ಥಿಕ, ಉದ್ಯಮ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಪಾಲಿಕೆಯ ವತಿಯಿಂದ ಮಹತ್ವದ ನಿರ್ಣಯ ಕೈಗೊಂಡು ನಗರದ ದೀಪಾಲಂಕಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದೆ ಯಾವುದೇ ಆಡಳಿತ ವ್ಯವಸ್ಥೆ ಬಂದರೂ ದೀಪಾಲಂಕಾರದ ವ್ಯವಸ್ಥೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ನಾರಾಯಣ ಗುರು ವೃತ್ತ ಉದ್ಘಾಟನೆ: ಮಂಗಳೂರು ದಸರಾ‌ ಸಂದರ್ಭದಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಉದ್ಘಾಟನೆಯಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ತ್ವರಿತ ಗತಿಯಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಂತಿಮ ಹಂತ ತಲುಪಿದೆ. ದಸರಾ ಸಂಭ್ರಮಾಚರಣೆಯ ಸಂದರ್ಭದಲ್ಲಿ ಉದ್ಘಾಟನೆಗೆ ಸಿದ್ಧವಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು