10:43 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮಹೋತ್ಸವ; ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ: ಶಾಸಕ ವೇದವ್ಯಾಸ್ ಕಾಮತ್ 

20/09/2022, 21:01

ಮಂಗಳೂರು(reporterkarnataka.com):ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. 

ಮಂಗಳೂರು ದಸರಾ‌ ಖ್ಯಾತಿ ದೇಶದೆಲ್ಲೆಡೆ ಹಬ್ಬುತ್ತಿದೆ. ಕರಾವಳಿ ಭಾಗದಲ್ಲಿ ಮಂಗಳೂರು ದಸರಾ ಹೊಸ ಹುರುಪು ನೀಡಿದ್ದು ಇದಕ್ಕೆ ಪೂರಕವಾಗಿ ಪಾಲಿಕೆಯ ವತಿಯಿಂದ ನಗರದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಮಂಗಳಾದೇವಿ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಸೇರಿದಂತೆ ನಗರದಲ್ಲಿ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮಂಗಳೂರು ದಸರಕ್ಕೆ ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲಿ ಮನ್ನಣೆ ದೊರೆಯುತಿದ್ದು ಮುಂಬರುವ ದಿನಗಳಲ್ಲಿ ದೇಶ ವಿದೇಶದಿಂದ ಭಕ್ತರನ್ನು ಆಕರ್ಷಿಸುತ್ತದೆ ಎಂದು ಹೇಳಿದ್ದಾರೆ. 

ಮಂಗಳೂರು ದಸರಾ ಮೂಲಕ ಈ ಭಾಗದ ಆರ್ಥಿಕ, ಉದ್ಯಮ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಪಾಲಿಕೆಯ ವತಿಯಿಂದ ಮಹತ್ವದ ನಿರ್ಣಯ ಕೈಗೊಂಡು ನಗರದ ದೀಪಾಲಂಕಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದೆ ಯಾವುದೇ ಆಡಳಿತ ವ್ಯವಸ್ಥೆ ಬಂದರೂ ದೀಪಾಲಂಕಾರದ ವ್ಯವಸ್ಥೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ನಾರಾಯಣ ಗುರು ವೃತ್ತ ಉದ್ಘಾಟನೆ: ಮಂಗಳೂರು ದಸರಾ‌ ಸಂದರ್ಭದಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಉದ್ಘಾಟನೆಯಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. ತ್ವರಿತ ಗತಿಯಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಅಂತಿಮ ಹಂತ ತಲುಪಿದೆ. ದಸರಾ ಸಂಭ್ರಮಾಚರಣೆಯ ಸಂದರ್ಭದಲ್ಲಿ ಉದ್ಘಾಟನೆಗೆ ಸಿದ್ಧವಾಗಲಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು