3:28 PM Friday23 - January 2026
ಬ್ರೇಕಿಂಗ್ ನ್ಯೂಸ್
ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮೆರವಣಿಗೆ: ಜನಸಾಗರದ ನಡುವೆ ಶಾರದಾ ಮಾತೆ, ನವದುರ್ಗೆಯರ ಭವ್ಯ ಶೋಭಾಯಾತ್ರೆ

14/10/2024, 00:26

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.ಕಂ

ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ನವರಾತ್ರಿ ಮಹೋತ್ಸದ ಅಂಗವಾಗಿ ದಸರಾ ಶೋಭಾಯಾತ್ರೆ ಭಾರೀ ಜನಸ್ತೋಮದ ಉಪಸ್ಥಿತಿಯಲ್ಲಿ ಭಾನುವಾರ ಆರಂಭವಾಯಿತು.
ದಸರಾ ಶೋಭಾಯಾತ್ರೆಗೆ ಕೇಂದ್ರ ಮಾಜಿ ಸಚಿವ
ಬಿ. ಜನಾರ್ದನ ಪೂಜಾರಿ ಚಾಲನೆ ನೀಡಿದರು. ಮಹಾಗಣಪತಿ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಬಳಿಕ ನವದುರ್ಗೆಯರ ವಿಗ್ರಹದ ಪೂಜೆ ನಂತರ ಶಾರದಾ ದೇವಿ ವಿಗ್ರಹದ ಮೆರವಣಿಗೆಗೆ ಚಾಲನೆ ನೀಡಲಾಯಿತು.



ಕುದ್ರೋಳಿ ಕ್ಷೇತ್ರದಿಂದ ಹೊರಟ ಶೋಭಾಯಾತ್ರೆ ಮಣ್ಣಗುಡ್ಡ ಮಾರ್ಗವಾಗಿ, ನಾರಾಯಣ ಗುರು ವೃತ್ತ -ಲಾಲ್‌ಬಾಗ್, ಬಲ್ಲಾಳ್‌ ಬಾಗ್, ಪಿವಿಎಸ್ ವೃತ್ತ, ನವಭಾರತ್ ಸರ್ಕಲ್, ಕೆ.ಎಸ್‌. ರಾವ್ ರಸ್ತೆ, ಹಂಪನಕಟ್ಟೆ ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್, ಚಿತ್ರಾ ಟಾಕೀಸ್, ಅಳಕೆ ಮಾರ್ಗ ವಾಗಿ ಕ್ಷೇತ್ರ ಕುದ್ರೋಳಿಗೆ ಮರಳಲಿದೆ. ಅ. 14 ರಂದು ಬೆಳಿಗ್ಗೆ ಪ್ರಾತಃಕಾಲ ಮಂಟಪ ಪೂಜೆ ಬಳಿಕ ದೇವಳದ ಪುಷ್ಕರಣಿಯಲ್ಲಿ ಶಾರದೆಯ ವಿಸರ್ಜನೆ ನಡೆಯಲಿದೆ.



ಶಾಸಕ ವೇದವ್ಯಾಸ ಕಾಮತ್, ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್ , ಮಾಜಿ ಸಚಿವ ರಮಾನಾಥ ರೈ, ಮಾಜಿ ಮೇಯರ್ ಶಶಿಧರ ಹೆಗ್ಡೆ, ದೇವಸ್ಥಾನದ ಕ್ಷೇತ್ರಾಡಳಿತ ಮಂಡಳಿ ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಖಜಾಂಜಿ ಪದ್ಮರಾಜ್ ಆರ್, ಆಡಳಿತ ಮಂಡಳಿಯ ಸದಸ್ಯರಾದ ರವಿಶಂಕರ್ ಮಿಜಾರ್, ಎಂ ಶೇಖರ ಪೂಜಾರಿ, ಸಂತೋಷ್ ಕುಮಾರ್,ಜಗದೀಪ್ ಡಿ ಸುವರ್ಣ, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ ಅಧ್ಯಕ್ಷ ಡಾ.ಅನಸೂಯ ಬಿ.ಟಿ. ಸಾಲ್ಯಾನ್ , ಉಪಾಧ್ಯಕ್ಷ ಡಾ.ಬಿ.ಜೆ. ಸುವರ್ಣ ಸದಸ್ಯರಾದ ಚಿತ್ತರಂಜನ್ ಗರೋಡಿ ಮುಂತಾದವರು ಶೋಭಾಯಾತ್ರೆ ಚಾಲನೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು