4:51 AM Sunday12 - July 2026
ಬ್ರೇಕಿಂಗ್ ನ್ಯೂಸ್
*ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ಮೆರವಣಿಗೆಗೆ ಈ ಬಾರಿ ಸೌಹಾರ್ದತೆಯ ಟಚ್: ಪ್ರಥಮ ಬಾರಿಗೆ ಐಕ್ಯತೆಯ ಸ್ತಬ್ದಚಿತ್ರ

21/10/2023, 22:08

ಮಂಗಳೂರು(reporterkarnataka.com): ನಾಡ ಹಬ್ಬ ದಸರಾ ನಾಡಿನ ಸಾಂಸ್ಕೃತಿಕ ಹಬ್ಬವಾಗಿದ್ದು ಜನಸಾಮಾನ್ಯರೆಲ್ಲರೂ ಭಾವೈಕ್ಯತೆಯಿಂದ ದಸರಾ ಸಂಭ್ರಮದಲ್ಲಿ ಪಾಲ್ಗೊಂಡಾಗ ನಾಡಿನ ಐಕ್ಯತೆ ಮತ್ತು ಸಮಗ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸಬಹುದು.ಈ ನಿಟ್ಟಿನಲ್ಲಿ ಮಂಗಳೂರು ದಸರಾದಲ್ಲಿ ಸರ್ವ ಜನಾಂಗದ ಜನರನ್ನು ಒಂದುಗೂಡಿಸುವ ಒಂದು ಸಣ್ಣ ಪ್ರಯತ್ನದ ಭಾಗವಾಗಿ ಈ ಬಾರಿಯ ಮಂಗಳೂರು ದಸರಾದ ವೈಭವದ ಮೆರವಣಿಗೆಯಲ್ಲಿ “ಸರ್ವ ಧರ್ಮದ ಜನತೆ ಕಟ್ಟಿ ಬೆಳೆಸಿದ ಮಂಗಳೂರು” ಎಂಬ ಕಣ್ಣೋಟದಿಂದ ಅಳವಡಿಸುವ ಟ್ಯಾಬ್ಲೋವನ್ನು ದಸರಾ ಮೆರವಣಿಗೆಯಲ್ಲಿ ಪ್ರದರ್ಶಿಸಿ ಮಂಗಳೂರಿನ ಅಭಿವೃದ್ಧಿಯಲ್ಲಿ ಸರ್ವ ಧರ್ಮದ ಜನರ ಕೊಡುಗೆಗಳನ್ನು ಸಮಾಜಕ್ಕೆ ನೆನಪಿಸುವ ಅಪೂರ್ವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸ್ತಬ್ದಚಿತ್ರವನ್ನು ದ.ಕ‌.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ(ರಿ), ಸಂತ ಮದರ್ ತೆರೇಸಾ ವಿಚಾರ ವೇದಿಕೆ, ಮಂಗಳೂರು ಹಾಗೂ ಭಗತ್ ಸಿಂಗ್ ವಾರಿಯರ್ಸ್‌ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಅಯೋಜಿಸಲಾಗಿದ್ದು, ಇದರ ಯಶಸ್ವಿಗೆ ಸರ್ವ ಧರ್ಮದ ಜನತೆ ಸಂಪೂರ್ಣ ಸಹಕಾರ ನೀಡಬೇಕೆಂದು ವಿನಂತಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು