9:31 PM Saturday25 - October 2025
ಬ್ರೇಕಿಂಗ್ ನ್ಯೂಸ್
Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವ ಆರಂಭ; ಶಾರದಾ ಮಾತೆ, ನವದುರ್ಗೆಯರ ಪ್ರತಿಪ್ಠಾಪನೆ; 13ರಂದು ಶೋಭಾಯಾತ್ರೆ

03/10/2024, 12:48

ಮಂಗಳೂರು(reporterkarnataka.com): ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು, ಆ. 13ರಂದು ಭವ್ಯ ಶೋಭಾಯಾತ್ರೆ ನಡೆಯಲಿದೆ.


ಕುದ್ರೋಳಿಯಲ್ಲಿ ನಡೆಯುವ ದಸರಾ ಮಹೋತ್ಸವ ಅಕ್ಟೋಬರ್ 3 ರಿಂದ 14ವರೆಗೆ ನಡೆಯಲಿದೆ. ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಅಬ್ಬರದ ಸೌಂಡ್​, ಡಿಜೆ ಬಳಸದಿರಲು ನಿರ್ಧರಿಸಲಾಗಿದೆ. ದಸರಾ ಉದ್ಘಾಟನೆಯನ್ನು ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ನೆರವೇರಿಸಿದರು.
ಬೆಳಗ್ಗೆ ನವದುರ್ಗೆಯರು ಮತ್ತು ಶಾರದಾ ಪ್ರತಿಷ್ಠೆ ನಡೆಯಿತು. ಇಂದಿನಿಂದ ಅ.14 ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಕ್ಷೇತ್ರದಲ್ಲಿ ನಡೆಯಲಿದೆ.‌13 ರಂದು ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ನಡೆಯಲಿದೆ.
*ನಗರ ತುಂಬಾ ಮಿನುಗುವ ದೀಪ:* ಪ್ರತಿ ವರ್ಷದಂತೆ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಕುದ್ರೋಳಿ ದೇವಸ್ಥಾನ ಮತ್ತು ದಸರಾ ಶೋಭಾಯಾತ್ರೆ ಸಾಗುವ ರಸ್ತೆ ಮತ್ತು ಇತರೆಡೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ಲಾಲ್ ಭಾಗ್ ಪ್ರದೇಶದಲ್ಲಿ ಮನಮೋಹಕವಾಗಿದೆ.
*ಹಾಫ್ ಮ್ಯಾರಾಥಾನ್:* ಅ.6 ರಂದು ಬೆಳಗ್ಗೆ 5.30ಕ್ಕೆ ಹಾಫ್ ಮ್ಯಾರಾಥಾನ್ ನಡೆಯಲಿದೆ. ಇದು ಈ ಬಾರಿಯ ವಿಶೇಷವಾಗಿದೆ.
ಇದರಲ್ಲಿ ದೇಶದ ವಿವಿಧ ಭಾಗಗಳಿಂದ 2 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ.
*13 ರಂದು ಭವ್ಯ ಶೋಭಾಯಾತ್ರೆ:* ಅ.13 ರಂದು ಸಂಜೆ 4ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಮಂಗಳೂರು ದಸರಾ ಬೃಹತ್ ಶೋಭಾಯಾತ್ರೆ ಆರಂಭವಾಗಲಿದೆ. ರಾಜ್ಯದ ವಿವಿಧ ಕಡೆಗಳಿಂದ ಆಗಮಿಸುವ ನೃತ್ಯ ತಂಡಗಳು, ಸ್ತಬ್ದ ಚಿತ್ರಗಳು ಭಾಗವಹಿಸಲಿವೆ.
ಕೇರಳದ ಚೆಂಡೆ ವಾದ್ಯವೂ ಮೇಳೈಸಲಿದೆ.
*ಡಿಜೆ ಇಲ್ಲ:* ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವುದಿಲ್ಲ. ಪೊಲೀಸ್ ಇಲಾಖೆಯಿಂದಲೂ ಇದಕ್ಕೆ ಸೂಚನೆ ಇದೆ. ಶಬ್ದ ಮಾಲಿನ್ಯ ಆಗಬಾರದು. ಇದರಿಂದ ಯಾರಿಗೂ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಡಿಜೆಗೆ ಈ ಬಾರಿ ಅವಕಾಶ ಇಲ್ಲ. ಕರ್ನಾಟಕ ಹೈಕೋರ್ಟ್ ಮಡಿಕೇರಿ ದಸರಾಕ್ಕೆ ಸಂಬಂಧಿಸಿದಂತೆ ನೀಡಿದ ತೀರ್ಪಿನಂತೆ ಸೌಂಡ್ ಸಿಸ್ಟಮ್​ನಲ್ಲೂ ಕಡಿಮೆ ಶಬ್ದ ಬಳಸಲು ತೀರ್ಮಾನಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು