3:15 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವದ ಶೋಭಾಯಾತ್ರೆ: ಕಡಲನಗರಿಯಲ್ಲಿ ಎಲ್ಲೆಂದರಲ್ಲಿ ಜನಸಾಗರ!; ಲಾಡ್ಜ್ ಗಳು ಫುಲ್ !

06/10/2022, 03:29

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporter Karnataka): ಮಂಗಳೂರು ದಸರಾ ಎಂದೇ ಪ್ರಸಿದ್ಧಿ ಪಡೆದ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿವರ್ಷ ನಡೆಯುವ ನವರಾತ್ರಿ 
ಮಹೋತ್ಸವದ ಕೊನೆಯ ದಿನವಾದ ಬುಧವಾರ ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ಭಕ್ತಿ ಸಂಭ್ರಮದಿಂದ ನಡೆಯಿತು.


ಕುದ್ರೋಳಿ ಕ್ಷೇತ್ರದಿಂದ ಆರಂಭಗೊಂಡ ಶೋಭಾಯಾತ್ರೆ ಲೇಡಿಹಿಲ್ ಮಾರ್ಗವಾಗಿ ಲಾಲ್ ಭಾಗ್ ತಲುಪುವಾಗ ಸಂಭ್ರಮ ಮುಗಿಲು ಮುಟ್ಟಿತ್ತು. ಭಾರೀ ಸಂಖ್ಯೆಯಲ್ಲಿ ಲಾಲ್ ಬಾಗ್ , ಬಳ್ಳಾಲ್ ಬಾಗ್ ಪ್ರದೇಶದಲ್ಲಿ ನೆರೆದಿದ್ದರು. ಎಂ.ಜಿ.ರೋಡ್ ಜನಸಾಗರವಾಗಿ ಮಾರ್ಪಟ್ಟಿತ್ತು. ರಸ್ತೆಯ ಇಕ್ಕೆಲೆಗಳಲ್ಲಿ ಮಾತ್ರವಲ್ಲದೆ ರಸ್ತೆಯ ಮಧ್ಯದ ಡಿವೈಡರ್ ನಲ್ಲಿ ಕೂಡ ನಿಂತು ಜನರು ದಸರಾ ಮೆರವಣಿಗೆ ಹಾಗೂ ಶಾರದೆ ಮತ್ತು ನವದುರ್ಗೆಯರನ್ನು ಬರ ಮಾಡಿಕೊಂಡರು. ವಿವಿಧ ಕಟ್ಟಡಗಳ ಅಂತಸ್ತಿನಲ್ಲಿ ಹಾಗೂ ಟೆರೆಸ್ ಮೇಲೆ ನಿಂತು ಜನರು ದಸರಾ ಮೆರವಣಿಗೆಯನ್ನು ವೀಕ್ಷಿಸಿದರು. ವಿವಿಧ ಸ್ವಯಂಸೇವಾ ಸಂಸ್ಥೆ ಹಾಗೂ ಸಾಂಸ್ಕೃತಿಕ ಸಂಘಟನೆಗಳಿಂದ ವಿವಿಧ ತರಹದ ಟ್ಯಾಬ್ಲೋಗಳು ಜನರನ್ನು ಆಕರ್ಷಿಸಿತು.



ಮಂಗಳೂರು ದಸರಾ ಸಂಭ್ರಮದ ಸವಿಯಲ್ಲಿ ಕರಾವಳಿ ಮಾತ್ರವಲ್ಲದೆ ಹೊರ ರಾಜ್ಯ ಹಾಗೂ ವಿದೇಶಗಳಿಂದಲೂ ಪ್ರವಾಸಿಗರು ಮಂಗಳೂರಿಗೆ ಆಗಮಿಸಿದ್ದರು. ನಗರದ ಎಲ್ಲ ಲಾಡ್ಜ್ ಗಳು ಭರ್ತಿಯಾಗಿದ್ದವು. ಕೆಲವು ಲಾಡ್ಜ್ ಗಳು 24 ತಾಸಿನ ಬದಲು ಗೋವಾ ಮಾದರಿಯಲ್ಲಿ 12 ತಾಸಿಗೆ ಚೆಕ್ ಔಟ್ ಮಾಡುತ್ತಿದ್ದವು. ಹೊರಗಡೆಯಿಂದ ಬಂದ ಸಾಕಷ್ಟು ಪ್ರವಾಸಿಗರು ವಸತಿ ಸೇವೆ ದೊರಕದೆ ಕಾರಿನಲ್ಲೇ ರೆಸ್ಟ್ ತೆಗೆದುಕೊಳ್ಳಬೇಕಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು